ಅನ್ನಭಾಗ್ಯ ದುಡ್ಡು ಇಲ್ಲ, ಗೃಹಲಕ್ಷ್ಮಿಯೂ ಇಲ್ಲ – ಗ್ಯಾರಂಟಿಗೆ ʼಗ್ಯಾರಂಟಿʼ ಇಲ್ಲ!

– 5 ತಿಂಗಳಿನಿಂದ ಅನ್ನ ಭಾಗ್ಯದ ದುಡ್ಡು ಬಂದಿಲ್ಲ
– 3 ತಿಂಗಳಿನಿಂದ ಮಹಿಳೆಯರ ಖಾತೆಗೆ 2 ಸಾವಿರ ಜಮೆಯಾಗಿಲ್ಲ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಘೋಷಿಸಿದ ಎರಡು ಮಹತ್ವಾಕಾಂಕ್ಷಿ ಗ್ಯಾರಂಟಿ ಸ್ಕೀಂ (Congress Guarantee) ಯೋಜನೆಗಳಾದ ಅನ್ನಭಾಗ್ಯ (Anna Bhagya) ಮತ್ತು ಗೃಹಲಕ್ಷ್ಮಿ ಯೋಜನೆಯ (Gruhalakshmi) ಫಲಾನುಭವಿಗಳಿಗೆ ನೀಡುತ್ತಿದ್ದ ಹಣ ಸ್ಥಗಿತಗೊಂಡಿದೆ.

ಅನ್ಯಭಾಗ್ಯದಡಿ ಬಿಪಿಎಲ್‌ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ನೀಡಲಾಗುತ್ತಿದ್ದ ಹಣ 5 ತಿಂಗಳಿನಿಂದ ಸ್ಥಗಿತಗೊಂಡಿದ್ದರೆ ಗೃಹಲಕ್ಷ್ಮಿ ಹಣ 3 ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ.

ಯೋಜನೆ ಆರಂಭದಲ್ಲಿ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿತ್ತು. ಆದರೆ ಕೇಂದ್ರ ಸರ್ಕಾರದಿಂದ ಸರಿಯಾಗಿ ಸ್ಪಂದನೆ ಸಿಗದೇ ಇದ್ದಾಗ ರಾಜ್ಯ ಸರ್ಕಾರ ಅನ್ನಭಾಗ್ಯದ ಹಣ ನೀಡಲಾಗುವುದು ಎಂದು ತಿಳಿಸಿತ್ತು.

ಅದರಂತೆ ಸರ್ಕಾರ ಒಂದು ಕೆಜಿ ಅಕ್ಕಿಗೆ 34 ರೂ. ಪಾವತಿ ಮಾಡಬೇಕಿತ್ತು. ಒಂದು ಪಡಿತರ ಕುಟುಂಬದಲ್ಲಿ ಐವರು ಸದಸ್ಯರಿದ್ದರೆ 20 ಕೆಜಿಗೆ ಅಕ್ಕಿಗೆ ಪ್ರತಿ ತಿಂಗಳು 850 ರೂ. ಜಮೆ ಮಾಡಬೇಕಿತ್ತು. ಈ ವಿಚಾರದ ಬಗ್ಗೆ ಫಲಾನುಭವಿಗಳು ಅಧಿಕಾರಿಗಳನ್ನು ಪ್ರಶ್ನಿಸಿದರೆ ಹಣದ ಬದಲಿಗೆ ಅಕ್ಕಿಯನ್ನೇ ನೀಡಲಾಗುವುದು ಅಂತ ಹೇಳುತ್ತಿದ್ದಾರೆ. ಇದನ್ನೂ ಓದಿ: ಮೂವರನ್ನು ಕೊಲೆ ಮಾಡಿದ್ದೇನೆ, ನಾನು ಸಾಯ್ತಿನಿ – ಅಮೆರಿಕದಲ್ಲಿರುವ ಅಣ್ಣನಿಗೆ ಫೋನ್‌ ಮಾಡಿ ಹೇಳಿದ್ದ ಚೇತನ್‌

 

ಕುಟುಂಬದ ಯಜಮಾನಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಹಣ ಕಳೆದ ಮೂರು ತಿಂಗಳಿಂದ ಪಾವತಿಯಾಗಿಲ್ಲ. ಆರಂಭದಲ್ಲಿ ತಾಂತ್ರಿಕ ಸಮಸ್ಯೆ ಎಂಬ ಕಾರಣ ನೀಡಿ ಸರಿಯಾದ ಸಮಯಕ್ಕೆ ಪಾವತಿ ಆಗುತ್ತಿರಲಿಲ್ಲ. ಈಗ ಯಾವ ಕಾರಣಕ್ಕೆ ಪಾವತಿಯನ್ನು ನಿಲ್ಲಿಸಲಾಗಿದೆ ಎನ್ನುವುದು ತಿಳಿದು ಬಂದಿಲ್ಲ. ಇದನ್ನೂ ಓದಿ: ಉಡುಪಿ| ಹಳಿಯ ಕಬ್ಬಿಣ ಕದ್ದ ಬಾಲಕರಿಗೆ ಥಳಿಸಿದ್ದಕ್ಕೆ ರೈಲ್ವೇ ಸಿಬ್ಬಂದಿ ಮೇಲೆ ಕೇಸ್‌

ಈ ವಿಚಾರದ ಬಗ್ಗೆ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಮಹಿಳೆಯರು, ಎಲ್ಲ ಮಹಿಳೆಯರಿಗೆ 2 ಸಾವಿರ ರೂ. ದುಡ್ಡು ಕೊಡುತ್ತೇವೆ ಅಂತ ಹೇಳಿದ್ರು. 10 ಕೆಜಿ ಅಕ್ಕಿ ಸಿಗುತ್ತೆ ಎಂದಿದ್ದರು. ಚುನಾವಣಾ ಸಮಯದಲ್ಲಿ ಮನೆಗೆ ಮನೆಗೆ ಬಂದು ಕಾರ್ಡ್‌ ಹಂಚಿ ಹೋಗಿದ್ದರು. ಈಗ ಅಕ್ಕಿಯೂ ಇಲ್ಲ, ದುಡ್ಡು ಇಲ್ಲ. ಈ ರೀತಿ ಅನ್ಯಾಯ ಮಾಡುವುದು ಸರಿಯೇ? ಕೂಡಲೇ ಸರ್ಕಾರ ಘೋಷಣೆ ಮಾಡಿದಂತೆ ಹಣ್‌ ಮತ್ತು ಅಕ್ಕಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇನ್ನು ಮುಂದೆ ತಾಲೂಕು ಪಂಚಾಯಿತಿಯಿಂದ ಬಿಡುಗಡೆಯಾಗಲಿದೆ ಗೃಹಲಕ್ಷ್ಮಿ ಹಣ!