ಪರೀಕ್ಷೆಗೆ ಹಿಜಬ್ ಧರಿಸಿ ಬಂದ ಡಿಗ್ರಿ ವಿದ್ಯಾರ್ಥಿನಿಗೆ ಅನುಮತಿ ನಿರಾಕರಣೆ

ಶಿವಮೊಗ್ಗ: ನನ್ನ ಎಲ್ಲಾ ಸ್ನೇಹಿತರೂ ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ ನನಗೆ ಮಾತ್ರ ಹಿಜಬ್ ಧರಿಸಿದ್ದ ಕಾರಣ ಪರೀಕ್ಷೆ ಬರೆಯಲು ಬಿಡುತ್ತಿಲ್ಲ ಎಂದು ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ವೀಡಿಯೋ ಮೂಲಕ ಆಕ್ರೋಶ ಹೊರ ಹಾಕಿದ್ದಾಳೆ.

ಶಿವಮೊಗ್ಗ ಜಿಲ್ಲೆಯ ಡಿವಿಎಸ್ ಕಾಲೇಜಿನ ಕೊನೆಯ ವರ್ಷದ ಬಿಎ ವಿದ್ಯಾರ್ಥಿನಿ ಶಾಹಿನ್ ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ್ದಳು. ಆದರೆ ನ್ಯಾಯಾಲಯದ ಆದೇಶದಂತೆ ಆಕೆ ಹಿಜಬ್ ಧರಿಸಿದ್ದ ಕಾರಣ ಪರೀಕ್ಷೆ ಬರೆಯಲು ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಿರಲಿಲ್ಲ. ಈ ಕಾರಣ ಶಾಹಿನ್ ತನ್ನ ಆಕ್ರೋಶವನ್ನು ವೀಡಿಯೋ ಮುಖಾಂತರ ಹೊರ ಹಾಕಿದ್ದಾಳೆ. ಇದನ್ನೂ ಓದಿ: ಪಿಎಸ್‍ಐ ದೈಹಿಕ ಪರೀಕ್ಷೆಯಲ್ಲೂ ಅಕ್ರಮ – ದಿವ್ಯಾ ಬಂಧನ ಸರ್ಕಾರದ ದೊಡ್ಡ ಸಾಧನೆಯಲ್ಲ: ಪ್ರಿಯಾಂಕ್ ಖರ್ಗೆ

ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವೀಡಿಯೋ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿನಿ, ನನ್ನ ಭವಿಷ್ಯ ಮತ್ತು ಕನಸನ್ನು ಹತ್ತಿಕ್ಕುತ್ತಿದ್ದಾರೆ. ರಾಜಕೀಯ ಕಾರಣಕ್ಕಾಗಿ ನಮಗೆ ಹೀಗೆಲ್ಲಾ ಮಾಡುತ್ತಿದ್ದಾರೆ. ನಾವು ಮತ್ತೆ ನಮ್ಮ ಹಕ್ಕಿನೊಂದಿಗೆ ವಾಪಸ್ ಆಗುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೈಕಮಾಂಡ್‌ ಗರಂ – ಆರಗ ಖಾತೆ ಬದಲಾವಣೆ?

ಇದೀಗ ವಿದ್ಯಾರ್ಥಿನಿಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Comments

Leave a Reply

Your email address will not be published. Required fields are marked *