ಶಿವಮೊಗ್ಗ/ಬಳ್ಳಾರಿ: ರಾಜ್ಯದೆಲ್ಲೆಡೆ ಲೋಕಸಭಾ ಕ್ಷೇತ್ರದ ಚುನಾವಣೆ ರಂಗೇರುತ್ತಿದೆ. ಇತ್ತ ವ್ಯಕ್ತಿಯೊಬ್ಬ ಮತದಾರರಿಗೆ ಹಣ ಹಂಚುತ್ತಿದ್ದಾಗ ಸಿಕ್ಕಿ ಬಿದ್ದಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ನಗರದ ವಾರ್ಡ್ ನಂಬರ್ 7 ವಿನೋಬಾನಗರದಲ್ಲಿ ಇರುವ ಮತದಾರರಿಗೆ ದುಡ್ಡು ಹಂಚುತ್ತಿದ್ದಾಗ ವ್ಯಕ್ತಿ ಸಿಕ್ಕಿ ಬಿದ್ದಿದ್ದಾನೆ. ಆತ ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಹಣ ಹಂಚಿಕೆ ಮಾಡುತ್ತಿದ್ದ ಎಂಬ ಮಾಹಿತಿಗಳು ಕೇಳಿಬರುತ್ತಿವೆ.

ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದ್ದು, ಮತದಾರರಿಗೆ ಪ್ರಚಾರದ ಜೊತೆ ತಲಾ 500 ರೂಪಾಯಿ ಹಂಚಿಕೆಯನ್ನು ಮಾಡಲಾಗುತ್ತಿತ್ತು. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಕಾರ್ಯಾಚರಣೆ ಮಾಡಿ, ಹಣ ಹಂಚುತ್ತಿದ್ದ ವ್ಯಕ್ತಿಯನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಈ ಬಗ್ಗೆ ಇನ್ನೂ ಯಾವುದೇ ದೂರು ದಾಖಲಾಗಿಲ್ಲ.
ಬಳ್ಳಾರಿಯಲ್ಲೂ ಕೂಡ ಎಮ್ಮಿಗನೂರು ಹಾಗೂ ಕುರುಗೋಡ್ ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಎಮ್ಮಿಗನೂರು ಗ್ರಾಮದಲ್ಲಿ ಮದ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ ಕುರುಗೋಡ್ ಗ್ರಾಮದಲ್ಲಿ ಮದ್ಯ ಸರಬರಾಜು ಮಾಡುತ್ತಿದ್ದ ಬೈಕ್ ಅನ್ನು ವಶಕ್ಕೆ ಪಡೆದು, 111 ಲೀಟರ್ ಮದ್ಯ ಜಪ್ತಿ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply