ಕೆಜಿಎಫ್ 2 ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನ ಕೆಜಿಎಫ್ 2 ಸಿನಿಮಾ ಐವತ್ತನೇ ದಿನದ ಪ್ರದರ್ಶನಕ್ಕೆ ಹತ್ತಿರವಾಗುತ್ತಿದೆ. ವಿಶ್ವದಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿ, ಭರ್ಜರಿ ಪ್ರದರ್ಶನ ಕೂಡ ಕಂಡಿದೆ. 1,200 ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸಿನಲ್ಲಿ ದೋಚಿದೆ. ಇಂತಹ ಸಿನಿಮಾದಲ್ಲಿ ಧೂಮ್ರಪಾನಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದ್ದು, ಅದರಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಹಾಗಾಗಿ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ : ತೆರೆಯ ಮೇಲೂ ಒಂದಾದ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ

ಬೆಂಗಳೂರಿನ ಕ್ಯಾನ್ಸರ್ ರೋಗಿಗಳ ನೆರವು ಸಂಘವು ಹೈಕೋರ್ಟ್‌ಗೆ ‘ಕೆಜಿಎಫ್ 2’ ಸಿನಿಮಾವನ್ನು ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಇದೊಂದು ಸಮಾಜಿಕ ಕಳಕಳಿ ಇಲ್ಲದ ಸಿನಿಮಾ. ಧೂಮಪಾನವನ್ನು ವಿಜೃಂಭಿಸಲಾಗಿದೆ. ಇದರಿಂದಾಗಿ ಮಕ್ಕಳು ಮತ್ತು ಯುವಕರ ಮೇಲೆ ದುಷ್ಟಪರಿಣಾಮ ಬೀರಲಿದೆ ಎಂದು ಅರ್ಜಿಲಯಲ್ಲಿ ಉಲ್ಲೇಖಿಸಲಾಗಿತ್ತು. ಸಿನಿಮಾ ತಡೆ ಹಿಡಿದು, ಸೆನ್ಸಾರ್ ಮಂಡಳಿಯು ಕೊಟ್ಟಿರುವ ಯು/ಎ ಪ್ರಮಾಣ ಪತ್ರವನ್ನು ಹಿಂಪಡೆಯಬೇಕೆಂದು ಕೇಳಿತ್ತು. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ಸ್ ನಿಂದ ಮತ್ತೆರಡು ಪ್ಯಾನ್ ಇಂಡಿಯಾ ಸಿನಿಮಾ

ನ್ಯಾಯಮೂರ್ತಿಗಳಾದ ರಿತುರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠವು ಈ ಅರ್ಜಿ ವಿಚಾರಣೆಯನ್ನು ನಡೆಸಿತು. ಈ ಸಂದರ್ಭದಲ್ಲಿ ಸರ್ಕಾರದ ಪರ ವಿಜಯಕುಮಾರ್ ಅವರು ವಾದ ಮಂಡಿಸಿ, ‘ಈಗಾಗಲೇ ಸಿನಿಮಾ ರಿಲೀಸ್ ಆಗಿದೆ. ಪ್ರದರ್ಶನವನ್ನೂ ಕಾಣುತ್ತಿದೆ. ಹಾಗಾಗಿ ಅರ್ಜಿ ವಿಚಾರಣೆಯ ಮಾನ್ಯತೆ ಕಳೆದುಕೊಂಡಿದೆ’ ಎಂದು ವಾದ ಮಂಡಿಸಿದರು. ಈ ವಾದವನ್ನು ಆಲಿಸಿದ ಪೀಠ ಅರ್ಜಿಯನ್ನು ವಜಾ ಮಾಡಿದೆ.

Comments

Leave a Reply

Your email address will not be published. Required fields are marked *