ಲಸಿಕೆ ಹಾಕಿಸಿಕೊಳ್ಳದ ರೋಗಿಗಳಿಗೆ ಸಿಗಲ್ಲ ಉಚಿತ ಕೋವಿಡ್‌ ಚಿಕಿತ್ಸೆ : ಕೇರಳ ಸರ್ಕಾರ

ತಿರುವನಂತಪುರಂ: ಓಮಿಕ್ರಾನ್ ವೈರಸ್‍ ಭೀತಿ ಹೆಚ್ಚಾಗುತ್ತಿದೆ. ಕೊರೊನಾ ಲಸಿಕೆ ಪಡೆಯುವಂತೆ ಉತ್ತೇಜಿಸಲು ಲಸಿಕೆ ಹಾಕದ ಕೋವಿಡ್ -19 ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೋವಿಡ್ ತಡೆಗಟ್ಟುವ ಕ್ರಮಗಳೊಂದಿಗೆ ಸಹಕರಿಸದವರಿಗೆ ಉಚಿತ ಚಿಕಿತ್ಸೆ ಇಲ್ಲ. ಲಸಿಕೆ ಪಡೆಯದ ಶಿಕ್ಷಕರು ಮತ್ತು ಕಚೇರಿಗಳಲ್ಲಿ ಕೆಲಸ ಮಾಡುವ ಅಥವಾ ಸಾರ್ವಜನಿಕರೊಂದಿಗೆ ಸಂವಹನ ನಡೆಸುವ ಉದ್ಯೋಗಿಗಳು, ಎಲ್ಲರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು RTPCR ಪರೀಕ್ಷೆಗಳಿಗೆ ತಾವೇ ಹಣ ಪಾವತಿಸಬೇಕಾಗುತ್ತದೆ ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡುವ ಮೂಲಕವಾಗಿ ಜನರಿಗೆ ಜಾಗೃತಿಯ ಸೂಚನೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಸ್ಯಾಂಪಲ್‌ ಕಳುಹಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ

ನಿನ್ನೆ ನಡೆದ ಕೋವಿಡ್-19 ಪರಿಶೀಲನಾ ಸಭೆಯ ಬಳಿಕ ಸಿಎಂ ಪಿಣರಾಯಿ ವಿಜಯನ್ ಇಂತಹುದೊಂದು ನಿರ್ಧಾರಕ್ಕೆ ಬಂದಿದ್ದು, ಕೊರೊನಾ ನಿಯಂತ್ರಣ ಕ್ರಮಗಳೊಂದಿಗೆ ಸಹಕರಿಸದ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುವುದಿಲ್ಲ. ಲಸಿಕೆಯನ್ನು ತೆಗೆದುಕೊಳ್ಳದವರಿಗೆ ಚಿಕಿತ್ಸಾ ವೆಚ್ಚವನ್ನೂ ಸರ್ಕಾರ ಭರಿಸುವುದಿಲ್ಲ. ಅಲರ್ಜಿ ಅಥವಾ ಯಾವುದೇ ಕಾಯಿಲೆಯ ಹಿನ್ನೆಲೆಯಲ್ಲಿ ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕುವವರು ಸರ್ಕಾರಿ ಸೇವೆಯಲ್ಲಿರುವ ವೈದ್ಯರು ನೀಡಿರುವ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು. ಇದು ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರು ಮತ್ತು ಶಿಕ್ಷಕರಿಗೂ ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಾಸಕ ವಿಶ್ವನಾಥ್ ಹತ್ಯೆಗೆ ಸ್ಕೆಚ್‌ – ಸುಪಾರಿ ಕೊಡ್ತಿರೋ ವೀಡಿಯೋ, ಆಡಿಯೋ ವೈರಲ್‌

ಲಸಿಕೆ ಹಾಕಿಸಿಕೊಳ್ಳದಿದ್ದರೆ ಪ್ರತಿ ವಾರ ಆರ್‍ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ, ಅದಕ್ಕಾಗಿ ಅವರೇ ವೆಚ್ಚವನ್ನು ಭರಿಸಬೇಕಾಗುತ್ತದೆ. ಪರೀಕ್ಷಾ ವರದಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು. ಕಚೇರಿಗೆ ತೆರಳುವವರಿಗೂ ಇದು ಕಡ್ಡಾಯವಾಗಿದೆ. ಹೀಗೆ ತೆಗೆದುಕೊಂಡ ಕ್ರಮಗಳು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದು ವಿಜಯನ್ ಜನರಲ್ಲಿ ಕೊರೊನಾ ಜಾಗೃತಿಯ ಕುರಿತಾಗಿ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *