ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

ಅಹಮದಾಬಾದ್:‌ ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ (Air India Plane Crash) ಪತನಗೊಂಡ ಘಟನೆ ಅಹಮದಾಬಾದ್‌ನ (Ahmedabad) ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ.

ಸುಮಾರು 232 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ. ಮಧ್ಯಾಹ್ನ 1:50ರ ಸುಮಾರಿಗೆ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ವಿಮಾನ ಪ್ರಯಾಣಿಕರನ್ನು ಹೊತ್ತು ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ. ಟೇಕಾಫ್‌ ಆದ 2 ಕಿ.ಮೀ ದೂರದಲ್ಲಿ ವಿಮಾನ ಪತನಗೊಂಡಿದೆ.

ಘಟನಾ ಸ್ಥಳಕ್ಕೆ 7 ಅಗ್ನಿ ಶಾಮಕ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ.  ವಿಮಾನ ಜನವಸತಿ ಕಟ್ಟಡದ ಮೇಲೆ ಬಿದ್ದಿದೆ. ಹೀಗಾಗಿ  ಸಾವು ನೋವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆಯಿದೆ.