ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಫೋಟ – ಓರ್ವ ಪೊಲೀಸ್ ಸಾವು, ಮೂವರಿಗೆ ಗಾಯ

ರಾಯ್ಪುರ: ಮಾವೋವಾದಿಗಳು ಇಟ್ಟಿದ್ದ ಸುಧಾರಿತ ಸ್ಫೊಟಕ ಸಾಧನ (IED) ಸ್ಫೋಟಗೊಂಡು ಓರ್ವ ಪೊಲೀಸ್ ಜವಾನ್ ಮೃತಪಟ್ಟಿದ್ದು, ಮೂವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾ ಮೀಸಲು ಪಡೆ (DRJ) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ತೆರಳಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ

ಸ್ಫೋಟದಲ್ಲಿ ಆರ್‌ಜಿ ಪೊಲೀಸ್ ಜವಾನ್‌(Police Jawan) ದಿನೇಶ್ ನಾಗ್ ಮೃತಪಟ್ಟಿದ್ದಾರೆ. ಅಲ್ಲದೇ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್‌ ಪರಿಸ್ಥಿತಿಯನ್ನ ಅಮೆರಿಕ ಸೂಕ್ಷ್ಮವಾಗಿ ಗಮನಿಸ್ತಿದೆ – ಕದನ ವಿರಾಮ ಕುಸಿಯಬಹುದು: ಮಾರ್ಕೊ ರೂಬಿಯೊ

ಕಳೆದವಾರವೂ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಫೋಟಗೊಂಡು ಡಿಆರ್‌ಜಿಯ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು.