ವಾಯುಸೇನೆ ವಿಮಾನದಲ್ಲಿ ಲ್ಯಾಂಡಿಂಗ್ – ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಮೋದಿ

ಲಕ್ನೋ: ಇಲ್ಲಿನ ಕರ್ವಾಲ್ ಖೇರಿಯಲ್ಲಿರುವ ಸುಮಾರು 341 ಕಿ.ಮೀ. ಉದ್ದದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಿದ್ದಾರೆ.

ವಾಯುಸೇನೆಯ ಸಿ-130 ಜೆ ಸೂಪರ್ ಹಕ್ರ್ಯೂಲಸ್ ವಿಮಾನದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಈ ವಿಮಾನ ಎಕ್ಸ್‌ಪ್ರೆಸ್‌ವೇಯಲ್ಲಿ ಲ್ಯಾಂಡಿಂಗ್ ಆಗಿತ್ತು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜ್‍ಕುಮಾರ್ ರಾವ್ – ಫೋಟೋ ವೈರಲ್

ಉದ್ಘಾಟಿಸಿ ನಂತರ ಮಾತನಾಡಿದ ಅವರು, ಯುಪಿ ಸಾಮರ್ಥ್ಯದ ಬಗ್ಗೆ ಅನುಮಾನ ಇರುವವರು ಇಂದು ಸುಲ್ತಾನಪುರಕ್ಕೆ ಬನ್ನಿ. ಮೂರ್ನಾಲ್ಕು ವರ್ಷಗಳ ಹಿಂದೆ ಕೇವಲ ತುಂಡು ಭೂಮಿಯಾಗಿದ್ದ ಜಾಗದಲ್ಲಿ ಈಗ ಅತ್ಯಾಧುನಿಕ ಎಕ್ಸ್‌ಪ್ರೆಸ್‌ವೇ ರೂಪುಗೊಂಡಿದೆ. ಮೂರು ವರ್ಷಗಳ ಹಿಂದೆ ನಾನು ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ, ಮುಂದೊಂದು ದಿನ ನಾನು ಇಲ್ಲಿ ವಿಮಾನದಲ್ಲಿ ಇಳಿಯುತ್ತೇನೆ ಎಂದುಕೊಂಡಿರಲಿಲ್ಲ ಎಂದು ಸ್ಮರಿಸಿದರು.

ದೇಶದ ಸರ್ವತೋಮುಖ ಅಭಿವೃದ್ಧಿ ಮುಖ್ಯ. ಕೆಲವು ಪ್ರದೇಶಗಳು ಅಭಿವೃದ್ಧಿಯ ಓಟದಲ್ಲಿ ಮುನ್ನಡೆಯುತ್ತಿವೆ. ಇನ್ನೂ ಕೆಲವು ಪ್ರದೇಶಗಳು ದಶಕಗಳಿಂದ ಹಿಂದುಳಿದಿವೆ. ಇದು ಒಳಿತಲ್ಲ. ಅಭಿವೃದ್ಧಿ ನಿಟ್ಟಿನಲ್ಲಿ ನಾವು ಮುನ್ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಹೆಸರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ- ಚಿಕಿತ್ಸೆ ಕೊಡಲು ವೈದ್ಯರೇ ಇಲ್ಲ

ಏನಿದರ ವಿಶೇಷ?
341 ಕಿ.ಮೀ. ಉದ್ದದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಲಖನೌ ಚಂದ್ ಸರಾಯ್ ಗ್ರಾಮದಿಂದ ಆರಂಭವಾಗಿ ರಾಷ್ಟ್ರೀಯ ಹೆದ್ದಾರಿ 31ರ ಗಾಜಿಪುರದ ಹೈದರಿಯಾ ಗ್ರಾಮದಲ್ಲಿ ಕೊನೆಯಾಗುತ್ತದೆ. ಈ ಎಕ್ಸ್‌ಪ್ರೆಸ್‌ವೇ ಪ್ರಸ್ತುತ ಆರು ಪಥಗಳನ್ನು ಹೊಂದಿದೆ.

ಎಕ್ಸ್‍ಪ್ರೆಸ್‍ವೇ ತುರ್ತು ಸಂದರ್ಭಗಳಲ್ಲಿ ಭಾರತೀಯ ವಾಯು ಪಡೆಯ ಯುದ್ಧ ವಿಮಾನಗಳು ಹಾರಾಟ ಆರಂಭಿಸಲು ಮತ್ತು ಬಂದಿಳಿಯಲು ಸುಲ್ತಾನ್‍ಪುರ ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ಏರ್‍ಸ್ಟ್ರಿಪ್ ನೆರವಾಗಲಿದೆ. 3.2 ಕಿ.ಮೀ. ಉದ್ದದದ ಏರ್ ಸ್ಟ್ರಿಪ್ ನಿರ್ಮಿಸಲಾಗಿದೆ. ಈ ಎಕ್ಸ್‌ಪ್ರೆಸ್‌ವೇ ಅನ್ನು 22,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

2018ರ ಜಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದರು. ದಾಖಲೆಯ ಮೂರು ವರ್ಷದಲ್ಲಿ ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾಗಿರುವುದು ವಿಶೇಷ.

Comments

Leave a Reply

Your email address will not be published. Required fields are marked *