ಕರ್ನಾಟಕದಲ್ಲಿ ಪ್ರಧಾನಿ ಮೋದಿ ರಣಕಹಳೆ – ಚಿಕ್ಕೋಡಿಯಲ್ಲಿ ಬೃಹತ್ ರ‍್ಯಾಲಿಯಲ್ಲಿ ಭಾಷಣ

ಬೆಳಗಾವಿ: ಲೋಕಸಭಾ ಚುನಾವಣೆಗೆ ಪಕ್ಷಗಳು ಸಿದ್ಧತೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇದೇ ತಿಂಗಳು ಕರ್ನಾಟಕ್ಕೆ ಆಗಮಿಸಲಿದ್ದಾರೆ.

ಜುಲೈ 29ರಂದು ಬೆಳಗಾವಿಗೆ ಪ್ರಧಾನಿ ಆಗಮಿಸಲಿದ್ದು, ಜಿಲ್ಲೆಯ ಚಿಕ್ಕೋಡಿಯಲ್ಲಿ ರೈತರ ಬೃಹತ್ ರ‍್ಯಾಲಿಯಲ್ಲಿ ಭಾಷಣ ಮಾಡಲಿದ್ದಾರೆ. ಭಾಷಣದಲ್ಲಿ ಕನಿಷ್ಠ ಬೆಂಬಲ ಬೆಲೆ, ಕಬ್ಬಿಗೆ ಬೆಂಬಲ ಬೆಲೆ ಸೇರಿದಂತೆ ರೈತರ ಪರ ಯೋಜನೆಗಳ ಬಗ್ಗೆ ಮಾತಾಡಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ರೈತರ 50 ಬೃಹತ್ ರ‍್ಯಾಲಿಗಳನ್ನು ನಡೆಸಲಿದ್ದಾರೆ.

ದೇಶಾದ್ಯಂತ ಕುತೂಹಲ ಮೂಡಿಸಿದ್ದ ಅವಿಶ್ವಾಸ ನಿರ್ಣಯ ಮಂಡನೆ ಶುಕ್ರವಾರ ಲೋಕಸಭೆಯಲ್ಲಿ ನಡೆದಿದ್ದು, ನಿರೀಕ್ಷೆಯಂತೆ ಪ್ರತಿಪಕ್ಷಗಳಿಗೆ ಸೋಲಾಗಿದೆ. ವಿಶ್ವಾಸಮತ ಸಾಧಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಯಶಸ್ವಿಯಾಗಿದೆ. ಬಹುಮತ ಸಾಬೀತಿಗೆ 226 ಮತ ಬೇಕಾಗಿತ್ತು. ಆದರೆ ಎನ್‍ಡಿಎ ಪರ 325 ಮತಗಳು ಚಲಾವಣೆಯಾದವು. ಕಾಂಗ್ರೆಸ್ ಮೈತ್ರಿಕೂಟದ ಪರವಾಗಿ ಕೇವಲ 126 ಮತ ಚಲಾವವಣೆಯಾದವು. ಹೀಗಾಗಿ 199 ಮತಗಳ ಅಂತರದಿಂದ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಗೆಲುವು ಸಾಧಿಸಿದೆ. ಇನ್ನು ಈ ವೇಳೆ ಸದನದಲ್ಲಿ ಒಟ್ಟು 451 ಸದಸ್ಯರು ಹಾಜರಿದ್ದರು. ಇನ್ನು ಒಂದೂವರೆ ಗಂಟೆಗೂ ಹೆಚ್ಚು ಕಾಲ ಮಾತನಾಡಿದ ಮೋದಿ, ರಾಹುಲ್ ಗಾಂಧಿಯ ಎಲ್ಲಾ ಆರೋಪಕ್ಕೆ ಕೌಂಟರ್ ಕೊಟ್ಟಿದ್ದರು.

Comments

Leave a Reply

Your email address will not be published. Required fields are marked *