ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ

ಲಕ್ನೋ: ಉಕ್ರೇನ್‍ನಿಂದ ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳದ ಸಿಎಂ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಗುರುವಾರ ತರಾಟೆಗೆ ತೆಗೆದುಕೊಂಡರು.

ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್‍ಪಿ) ಪರವಾಗಿ ಪ್ರಚಾರ ಮಾಡುವಾಗ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರವು ಉಕ್ರೇನ್‍ನಲ್ಲಿರುವ ಭಾರತೀಯರನ್ನು ಯುದ್ಧದ ಮಧ್ಯೆ ತಮ್ಮಷ್ಟಕ್ಕೆ ಬಿಡುತ್ತಿದೆ. ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ ಮೋದಿ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಬಿಚ್ಚಿಟ್ಟ ಜನಾರ್ದನ ರೆಡ್ಡಿ ಪುತ್ರ!

ಇದೀಗ ಏನಾಗುತ್ತಿದೆ ನೋಡಿ. ಉಕ್ರೇನ್‍ನಲ್ಲಿ ಯುದ್ಧ ನಡೆಯುತ್ತಿದೆ. ಮೋದಿ ಇಲ್ಲಿ(ಯುಪಿ) ಸಭೆಗಳನ್ನು ಮಾಡುತ್ತಿದ್ದಾರೆ. ಯಾವುದು ಮುಖ್ಯ? ನಮ್ಮ ಭಾರತೀಯರನ್ನು ಮತ್ತು ವಿದ್ಯಾರ್ಥಿಗಳನ್ನು ಮರಳಿ ಕರೆತರುವುದು ಮುಖ್ಯವಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಯುದ್ಧವು ಪ್ರಾರಂಭವಾಗಲಿದೆ ಎಂದು ಮೂರು ತಿಂಗಳ ಮೊದಲೇ ತಿಳಿದಿದ್ದರೆ, ನೀವು ಭಾರತೀಯರನ್ನು ಉಕ್ರೇನ್‍ನಿಂದ ಏಕೆ ಮರಳಿ ಕರೆತರಲಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಲುನೋವು ತಾಳಲಾಗದೆ ಮರ್ಮಾಂಗವನ್ನೆ ಕತ್ತರಿಸಿಕೊಂಡ!

Comments

Leave a Reply

Your email address will not be published. Required fields are marked *