ಬಿಹಾರ, ಬಂಗಾಳಕ್ಕಿಂದು ಮೋದಿ ಭೇಟಿ – 18,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಪಾಟ್ನಾ: ಬಿಹಾರ ವಿಧಾನಸಭೆಯ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಕಾವು ಜೋರಾಗುತ್ತಿದೆ. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪ್ರವಾಸ ಕೂಡ ಹೆಚ್ಚಾಗಿ ನಡೆಯುತ್ತಿದೆ. ಇಂದು ಪಶ್ಚಿಮ ಬಂಗಾಳ, ಬಿಹಾರಕ್ಕೆ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, 18,000 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳ (Development Projects) ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಹೌದು. ಬಿಹಾರದ ಚಂಪಾರಣ್‌ ಬಳಿಕ ಪ್ರಧಾನಿ ಅವರ ಕಣ್ಣು ಈಗ ಮಗಧ ಪ್ರದೇಶದ ಮೇಲಿದೆ. ಹೀಗಾಗಿ ʻಮಿಷನ್‌ ಮಗಧʼ ಸಾಧಿಸುವ ಪ್ರಯತ್ನದ ಭಾಗವಾಗಿಯೂ ಇಂದು ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ

18,000 ಸಾವಿರ ಕೋಟಿಗೂ ಅಧಿಕ ಮೌಲ್ಯದ ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಈ ಪೈಕಿ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಹಾಗೂ ಕೋಲ್ಕತ್ತಾದಲ್ಲಿ 5,200 ಕೋಟಿಗೂ ಅಧಿಕ ಮೌಲ್ಯದ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಇದನ್ನೂ ಓದಿ: ಡಿಎಂಕೆ, ಬಿಜೆಪಿ ಯಾವುದೇ ಪಕ್ಷದ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ – ಟಿವಿಕೆ ವಿಜಯ್ ಘೋಷಣೆ

ಇದರಲ್ಲಿ ವಿದ್ಯುತ್, ಸಂಪರ್ಕ, ಆರೋಗ್ಯ ಮತ್ತು ಸಾರ್ವಜನಿಕರಿಗೆ ಸಂಬಂಧಿಸಿದ ಹಲವು ಯೋಜನೆಗಳು ಸೇರಿವೆ. ಇದರ ಹೊರತಾಗಿ, ಎರಡು ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಇದರಲ್ಲಿ ಒಂದು ರೈಲು ದೆಹಲಿ ಮತ್ತು ಗಯಾ ನಡುವೆ ಚಲಿಸಿದ್ರೆ, ಮತ್ತೊಂದು ರೈಲು ಬಿಹಾರ ಮತ್ತು ಜಾರ್ಖಂಡ್ ನಡುವೆ ಚಲಿಸುತ್ತದೆ. ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಹೆಚ್‌ಡಿಕೆ

ಬಿಹಾರ ಭೇಟಿ ಸಮಯದಲ್ಲಿ ಮೋದಿ ಅವರು ಗಯಾದ ಜೊತೆಗೆ ಪಾಟ್ನಾ ಮತ್ತು ಬೇಗುಸರಾಯ್ ಜಿಲ್ಲೆಗಳಿಗೂ ಭೇಟಿ ನೀಡಲಿದ್ದು, ಮಗಧ ವಿಶ್ವವಿದ್ಯಾಲಯದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಿಹಾರದ ಮಗಧ ಪ್ರದೇಶವು ಬಿಹಾರದಲ್ಲಿ ಬಿಜೆಪಿಯ ಅತ್ಯಂತ ದುರ್ಬಲ ಕೋಟೆ ಎಂದು ಪರಿಗಣಿಸಲಾಗಿದೆ. ಇದರ ಮೇಲೆ ತನ್ನ ಹಿಡಿತ ಸಾಧಿಸಲು ಪ್ರಯತ್ನಿಸುತ್ತಲೇ ಇದೆ. ಇದರ ಭಾಗವಾಗಿ ಇಂದು ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಅವರ ಭೇಟಿ ಬಿಗ್‌ ಬೂಸ್ಟ್‌ ನೀಡಲಿದೆಯೇ ಅನ್ನೋದನ್ನ ಕಾದುನೋಡಬೇಕಿದೆ.

ಒಟ್ಟಿನಲ್ಲಿ ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಬಿಹಾರದಲ್ಲಿ ʻಮತದಾರರ ಹಕ್ಕುಗಳ ಯಾತ್ರೆʼ ನಡೆಸುತ್ತಿರುವ ಹೊತ್ತಿನಲ್ಲೇ ಪ್ರಧಾನಿಯವರ ಭೇಟಿ ರಾಜಕೀಯ ಕಾವು ಹೆಚ್ಚಿಸಿದೆ.