ಮಂಗಳೂರು: ಗುಜರಾತ್ ಚುನಾವಣೆಯ ಫಲಿತಾಂಶದ ದಿನವಾದ ಸೋಮವಾರವೇ ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಗೆ ಆಗಮಿಸಲಿದ್ದಾರೆ.
ಪ್ರಧಾನಿ ಮೋದಿ ಅವರ ಮಂಗಳೂರು ಭೇಟಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ. ಲಕ್ಷದ್ವೀಪಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ನಾಳೆ ರಾತ್ರಿ 11.30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಗರದ ಗೆಟ್ ವೇ ಹೊಟೇಲ್ ಅಥವಾ ಸಕ್ರ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಪ್ರಧಾನಿ ಕೊಲ್ಲೂರಿಗೆ ಭೇಟಿ

ಡಿ.19ಕ್ಕೆ ಬೆಳಗ್ಗೆ ಸುಮಾರು 7.30ಕ್ಕೆ ಮಂಗಳೂರಿನಿಂದ ಸೇನಾ ಹೆಲಿಕಾಪ್ಟರ್ ಮೂಲಕ ಲಕ್ಷದ್ವೀಪ್ಕಕ್ಕೆ ತೆರಳಲಿದ್ದಾರೆ. ಲಕ್ಷದ್ವೀಪದಲ್ಲಿ ಪ್ರಧಾನಿಯವರು ಒಖ್ಹಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶವನ್ನು ವೀಕ್ಷಣೆ ಮಾಡಲಿದ್ದಾರೆ ಅಂತ ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರಧಾನಿಗೆ ಧರ್ಮಾಧಿಕಾರಿ ಮನವಿ
ಇದನ್ನೂ ಓದಿ: ಧರ್ಮಸ್ಥಳದಲ್ಲಿ ನಮೋ ಮೇನಿಯಾ- ಭಾಷಣದುದ್ದಕ್ಕೂ ಹೆಗ್ಗಡೆ ಅವರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಇದನ್ನೂ ಓದಿ: ಇದು ಎಳನೀರಲ್ಲ ಅಮೃತ ಎಂದು ಕರಾವಳಿಯ ಎಳನೀರಿನ ಸವಿಗೆ ಮನಸೋತ ಮೋದಿ!




Leave a Reply