ಮಕ್ಕಳ ವ್ಯಾಕ್ಸಿನ್ ವಿಚಾರದಲ್ಲಿ ಮೋದಿ ಸರ್ಕಾರದ ಎಚ್ಚರಿಕೆಯ ನಡೆ

ನವದೆಹಲಿ: ಮಕ್ಕಳ ಲಸಿಕೆ ನೀಡುವ ವಿಚಾರದಲ್ಲಿ ಪ್ರಧಾನಿ ಮೋದಿ ಸರ್ಕಾರ ಎಚ್ಚರಿಕೆಯ ನಡೆಯನ್ನು ಇಟ್ಟಿದೆ.

ಇಂದು ರಾತ್ರಿ 12 ರಿಂದ 18 ವರ್ಷಗಳ ಒಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ 15 ರಿಂದ 18 ವರ್ಷದ ಮಕ್ಕಳಿಗೆ ಮಾತ್ರ ವ್ಯಾಕ್ಸಿನ್ ನೀಡಲು ಮುಂದಾಗಿದೆ. ಇದನ್ನೂ ಓದಿ: ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ: ಮೋದಿ

ದೇಶದಲ್ಲಿ ಓಮಿಕ್ರಾನ್ ಸೊಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ಮೂರನೇ ಅಲೆ ಬರುವ ಸಾಧ್ಯತೆ ದಟ್ಟವಾಗಿದೆ. ಈ ಹಿಂದೆ ತಜ್ಞರು ಮೂರನೇ ಅಲೆ ಮಕ್ಕಳಿಗೆ ಪರಿಣಾಮ ಬೀರುತ್ತದೆ ಎಂಬ ಅಭಿಪ್ರಾಯ ತಿಳಿಸಿದ್ದರು. ಇದೀಗ ಮೂರನೇ ಅಲೆ ಪ್ರಾರಂಭದ ಹಂತದಲ್ಲೇ ಮಕ್ಕಳಿಗೆ ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮತಿ ನೀಡಿ ಸಿಹಿ ಸುದ್ದಿ ತಿಳಿಸಿತ್ತು. ಇದನ್ನೂ ಓದಿ: 15 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಅನುಮತಿ

ಡಿಸಿಜಿಐ ಲಸಿಕೆಗೆ ಅನುಮತಿ ನೀಡುತ್ತಿದ್ದಂತೆ ಇತ್ತ ದೇಶವನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, 15 ರಿಂದ 18 ವರ್ಷದ ಮಕ್ಕಳಿಗೆ ಮಾತ್ರ ವ್ಯಾಕ್ಸಿನ್ ನೀಡಲು ಮುಂದಾಗಿದೆ. ಈ ಮೂಲಕ ಈ ಹಂತದಲ್ಲಿ ವಿತರಣೆ ವೇಳೆ ಯಾವುದೇ ಸಮಸ್ಯೆ ಆಗದಿರಲು ಈ ನಿರ್ಧಾರವನ್ನು ಕೈಗೊಳ್ಳಲಾಗಿರಬಹುದು ಎಂದು ವರದಿಯಾಗುತ್ತಿದೆ. ಇದನ್ನೂ ಓದಿ: ಸರ್ಕಾರ ಆರ್ಡರ್ ನೀಡದಿದ್ರೆ ಕೋವಿಶೀಲ್ಡ್ ಉತ್ಪಾದನೆ ಶೇ.50ರಷ್ಟು ಕಡಿತಕ್ಕೆ ನಿರ್ಧಾರ: ಆದಾರ್ ಪೂನಾವಾಲಾ

ಮೊದಲ ಹಂತ ಮುಗಿದ ಬಳಿಕ 12-15 ವರ್ಷದ ಮಕ್ಕಳಿಗೆ ಎರಡನೇ ಹಂತದಲ್ಲಿ ವ್ಯಾಕ್ಸಿನ್ ನೀಡಲು ಪ್ಲಾನ್ ಮಾಡಿಕೊಂಡಿದೆ. ಇದಲ್ಲದೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಲಸಿಕೆ ವಿತರಣೆಗೆ ಕೇಂದ್ರವನ್ನು ತೆರೆಯಲು ಮುಂದಾಗಿದೆ.

ಮಕ್ಕಳ ಲಸಿಕೆಯ ಜೊತೆಗೆ ಕೊಮೊರ್ಬಿಡಿಟಿ ಹೊಂದಿರುವವರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ವೈದ್ಯರ ಶಿಫಾರಸಿನ ಮೇರೆಗೆ 2022ರ ಜನವರಿ 10 ರಿಂದ ಬೂಸ್ಟರ್ ಡೋಸ್‍ಗಳಿಗೆ ಅರ್ಹರಾಗಿರುತ್ತಾರೆ. ಕೋವಿಡ್‍ನ ಹೊಸ ಓಮಿಕ್ರಾನ್ ರೂಪಾಂತರದಿಂದಾಗಿ ವಿಶ್ವದ ಅನೇಕ ದೇಶಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ಭಯಪಡಬೇಡಿ ಆದರೆ ಜಾಗರೂಕರಾಗಿರಿ ಮತ್ತು ನಿಯಮಿತವಾಗಿ ಮಾಸ್ಕ್ ಧರಿಸಿ ಮತ್ತು ಕೈಗಳನ್ನು ಸ್ವಚ್ಛವಾಗಿಡಿ ಎಂದು ದೇಶವಾಸಿಗಳಲ್ಲಿ ಮೋದಿ ಮನವಿ ಮಾಡಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *