ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ – Photos ನೋಡಿ..

ಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಸೋಮವಾರ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಪ್ರಧಾನಿ ಮೋದಿ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಪ್ರಾಣ ಪ್ರತಿಷ್ಠೆ ಸಮಾರಂಭ ನಡೆಯಿತು.

ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಂಭ್ರಮ. ಬಾಲರಾಮನಿಗಾಗಿ ಬೆಳ್ಳಿ ಕಿರೀಟ ಹಿಡಿದು ಆಗಮಿಸಿದ ಮೋದಿ.

ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿದ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್‌, ರಾಜ್ಯಪಾಲೆ ಆನಂದಿ ಬೆನ್‌ ಪಾಟೀಲ್‌, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹಾಗೂ ಇತರರು ಸಾಥ್‌ ನೀಡಿದರು.

ಅಯೋಧ್ಯೆ ರಾಮಲಲ್ಲಾ ವಿಗ್ರಹಕ್ಕೆ ಆರತಿ ಬೆಳಗಿದ ಪ್ರಧಾನಿ ಮೋದಿ.

ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನಿಗೆ ಗಣ್ಯರಿಂದ ಪೂಜೆ, ಪ್ರಾರ್ಥನೆ.

ಅಯೋಧ್ಯೆ ಭಗವಾನ್‌ ರಾಮನಿಗೆ ದೀರ್ಘದಂಡ ನಮಸ್ಕಾರ ಮಾಡಿದ ಮೋದಿ.

ಅಯೋಧ್ಯೆ ರಾಮಮಂದಿರದ ಸುಂದರ ಕೆತ್ತನೆ ವೀಕ್ಷಿಸಿದ ಪ್ರಧಾನಿ ಮೋದಿ. 

ಅಯೋಧ್ಯೆ ಭಗವಾನ್‌ ರಾಮನ ಪಾದಕ್ಕೆ ಕಮಲ ಅರ್ಪಿಸಿದ ನಮೋ.

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಕೈಮುಗಿದು ನಮಸ್ಕರಿಸಿದ ಪ್ರಧಾನಿ.

ಪ್ರಾಣ ಪ್ರತಿಷ್ಠಾಪನೆ ವೇದಿಕೆ ಕಾರ್ಯಕ್ರಮದಲ್ಲಿ ಮೋದಿ. ಪ್ರಸಾದ ಸ್ವೀಕರಿಸಿ 11 ದಿನಗಳ ವ್ರತ ಕೈಬಿಟ್ಟ ಪ್ರಧಾನಿ.