ಜಾಗತಿಕ ನಾಯಕರ ಪಟ್ಟಿ ರಿಲೀಸ್‌ – ಮೋದಿಯೇ ನಂಬರ್‌ 1

ನವದೆಹಲಿ: ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಿಶ್ವ ನಾಯಕರ ಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

ಯುಎಸ್ ಮೂಲದ ಕನ್ಸಲ್ಟೆನ್ಸಿ ಸಂಸ್ಥೆಯ ‘ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್’ ಪ್ರಕಾರ ಭಾರತದಲ್ಲಿ ಶೇ.76 ರಷ್ಟು ಜನರು ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2ನೇ ಸ್ಥಾನವನ್ನು ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್‌ ಮ್ಯಾನುಯಲ್‌ ಲೋಪೆಜ್ ಒಬ್ರಡಾರ್ ಪಡೆದಿದ್ದಾರೆ. ಅವರ ನಾಯಕತ್ವಕ್ಕೆ ಶೇ.66 ಬೆಂಬಲ ವ್ಯಕ್ತವಾಗಿದೆ. ಇದನ್ನೂ ಓದಿ: ‘ಸೋ ಬ್ಯೂಟಿಫುಲ್‌’..: ಸಂಸತ್‌ ಭವನ ಕಣ್ತುಂಬಿಕೊಂಡು ಖುಷಿಪಟ್ಟ ಇನ್ಫೋಸಿಸ್‌ ಸುಧಾಮೂರ್ತಿ

58% ನೊಂದಿಗೆ ಸ್ವಿಟ್ಜರ್ಲೆಂಡ್ ಅಧ್ಯಕ್ಷ ಅಲೈನ್ ಬರ್ಸೆಟ್ ಮೂರನೇ ಸ್ಥಾನ ಪಡೆದಿದ್ದಾರೆ. ಹಿಂದಿನ ಸಮೀಕ್ಷೆಗಳಲ್ಲೂ ಪ್ರಧಾನಿ ಮೋದಿ ಜಾಗತಿಕ ರೇಟಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದರು. ಅಮೆರಿಕ ಅಧ್ಯಕ್ಷ ಜೋ ಬೈಡೆನ್ 37% ಅನುಮೋದನೆ ಹೊಂದಿದ್ದಾರೆ.

ಕೆನಡಾದ ಪಿಎಂ ಜಸ್ಟಿನ್ ಟ್ರುಡೊಗೆ 31%, ಭಾರತದ ಅಳಿಯನೂ ಆಗಿರುವ ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ರೇಟಿಂಗ್ 25% ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ 24 % ರೇಟಿಂಗ್‌ ಮೂಲಕ ನಂತರದ ಸ್ಥಾನಗಳಲ್ಲಿದ್ದಾರೆ. ಇದನ್ನೂ ಓದಿ: ಹಿರಿಯ ನಟಿ ಲೀಲಾವತಿ ನಿಧನಕ್ಕೆ ಪಿಎಂ ಮೋದಿ ಸಂತಾಪ

ಪ್ರಧಾನಿ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷವು (BJP) ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳಿಗೆ ಈಚೆಗೆ ನಡೆದ ಚುನಾವಣೆಯಲ್ಲಿ ವಿಜಯ ದಾಖಲಿಸಿದರು. ನಂತರ ಈ ರೇಟಿಂಗ್‌ಗಳು ಬಂದಿವೆ. ಪ್ರಧಾನಿ ಮೋದಿ ಇತ್ತೀಚೆಗೆ ಯುಎಇಯಲ್ಲಿ ನಡೆದ COP-28 ಹವಾಮಾನ ಕ್ರಿಯೆ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.