ಶಿಗ್ಗಾಂವಿ, ಸಂಡೂರಲ್ಲಿ ಯಾರಿಗೆ ಜಯ? – ಎಕ್ಸಿಟ್‌ ಪೋಲ್‌ ಮತ ಭವಿಷ್ಯ ಏನು ಗೊತ್ತಾ?

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಚನ್ನಪಟ್ಟಣದಲ್ಲಿ ಎನ್‌ಡಿಎ, ಶಿಗ್ಗಾಂವಿಯಲ್ಲಿ ಬಿಜೆಪಿ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.

ಪಿ-ಮಾರ್ಕ್‌ ನಡೆಸಿರುವ ಸಮೀಕ್ಷೆಯಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್‌ ಮುನ್ನಡೆ ಸಾಧಿಸಲಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್‌ ಸಂಸದ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಜಯಗಳಿಸಲಿದ್ದಾರೆ ಎಂದು ತಿಳಿದುಬಂದಿದೆ.

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಮುನ್ನಡೆ ಸಾಧಿಸಲಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ಗೆ ಹಿನ್ನಡೆಯಾಗಲಿದೆ ಎಂದು ಸಮೀಕ್ಷೆ ಹೇಳಿದೆ.