ನಿರಂತರ ಅತ್ಯಾಚಾರದಿಂದ ಅಪ್ರಾಪ್ತೆ ಪ್ರೆಗ್ನೆಂಟ್- ವೃದ್ಧ ಅರೆಸ್ಟ್

ರಾಮನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವೃದ್ಧನೊಬ್ಬನನ್ನು ಮಾಗಡಿ ಪೊಲೀಸರು (Police) ಬಂಧಿಸಿದ್ದಾರೆ. ಬಾಲಕಿ ಗರ್ಭಿಣಿಯಾದ ಹಿನ್ನೆಲೆ ಈ ಪ್ರಕರಣ ಬೆಳಕಿಗೆ ಬಂದಿದೆ.

ಮಾಗಡಿ (Magadi) ಮೂಲದ ಬೆಟ್ಟೇಗೌಡ (56) ಬಂಧಿತ ಆರೋಪಿಯಾಗಿದ್ದಾನೆ. ಈತ 13 ವರ್ಷದ ಬಾಲಕಿ ಮೇಲೆ ಈತ ನಿರಂತರ ಅತ್ಯಾಚಾರ ಎಸಗಿದ್ದಾನೆ. ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭಿಣಿ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಬಳಿಕ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗಿದೆ. ಅಲ್ಲದೇ ಬಾಲಕಿಯನ್ನು ಪೊಲೀಸರು ಶಿಶುಮಂದಿರಕ್ಕೆ ಕಳಿಸಿದ್ದಾರೆ. ಇದನ್ನೂ ಓದಿ: ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ಈ ಸಂಬಂಧ ಪ್ರಕರಣ ಬಯಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ (POCSO Case) ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ವೃದ್ಧ ದಂಪತಿ ನೇಣಿಗೆ ಶರಣು