ಬೆಂಗಳೂರು ಹೊರವಲಯದಲ್ಲಿ ರೇವ್ ಪಾರ್ಟಿ- ಅರೆನಗ್ನ ಸ್ಥಿತಿಯಲ್ಲಿ ಯುವತಿಯರ ಡ್ಯಾನ್ಸ್

– ವಿದ್ಯಾರ್ಥಿಗಳು ಸೇರಿ 20 ಜನ ವಶಕ್ಕೆ

ಬೆಂಗಳೂರು: ನಗರದ ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆದಿರುವುದು ಮತ್ತೆ ಬೆಳಕಿಗೆ ಬಂದಿದ್ದು, ಒಟ್ಟು 20 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ರೆಸಾರ್ಟ್‍ಗೆ ಎಂಟ್ರಿ ಕೊಡುತ್ತಿದ್ದಂತೆ ಯುವಕ, ಯುವತಿಯರು ಎದ್ನೋ ಬಿದ್ನೋ ಎಂದು ಓಡಿದ್ದಾರೆ. ಡ್ರಗ್ಸ್ ಸೇವಿಸಿ ಅರೆ ನಗ್ನ ಸ್ಥಿತಿಯಲ್ಲಿದ್ದ ಕೆಲವರನ್ನು ಖಾಕಿ ಪಡೆ ಹಿಡಿದಿದೆ. ರೇವ್ ಪಾರ್ಟಿಯ ಡ್ರಗ್ಸ್ ಜಾಲದಲ್ಲಿ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಗರದ ಹೊರ ವಲಯದ ಆನೇಕಲ್ ಬಳಿಯ ತಮ್ಮನಾಯಕನಹಳ್ಳಿ ಸಮೀಪವಿರುವ ಹಸಿರು ವ್ಯಾಲ್ಯೂ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ಎಗ್ಗಿಲದೇ ನಡೆಯುತ್ತಿದ್ದು, ಗಾಂಜಾ ಸೇರಿದಂತೆ ವಿವಿಧ ಡ್ರಗ್ಸ್ ಸೇವಿಸಿ, ತುಂಡುಡುಗೆ ತೊಟ್ಟು ಮಹಿಳೆಯರು ಹುಚ್ಚೆದ್ದು ಕುಣಿದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಆನೇಕಲ್ ಪೊಲೀಸರು 20 ಜನರನ್ನು ವಶಕ್ಕೆ ಪಡೆದಿದ್ದಾರೆ. 6 ಕಾರು ಸೇರಿದಂತೆ 15ಕ್ಕೂ ಹೆಚ್ಚು ಬೈಕ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ವಿದ್ಯಾಪೀಠಕ್ಕೆ ಉತ್ತಮ ಪ್ರತಿಕ್ರಿಯೆ – ಎರಡನೇ ದಿನದ ಕಾರ್ಯಕ್ರಮಗಳು ಏನು?

ರೆಸಾರ್ಟ್ ನ ನಿರ್ಜನ ಪ್ರದೇಶದಲ್ಲಿ ಹುಡುಗ, ಹುಡಿಗಿಯರು ರೇವ್ ಪಾರ್ಟಿ ನಡೆಸಿದ್ದು, ಗಾಂಜಾ ಸೇರಿದಂತೆ ವಿವಿಧ ಡ್ರಗ್ಸ್ ಸೇವಿಸಿ ಹುಚ್ಚೆದ್ದು ಕುಣಿದಿದ್ದಾರೆ. ಅರ್ಧಂಬಂರ್ಧ ಬಟ್ಟೆ ಹಾಕಿರುವ ಯುವಕ, ಯುವತಿಯರು ಡ್ರಗ್ಸ್ ನಶೆಯಲ್ಲಿ ತೇಲಿದ್ದಾರೆ.

ಮಧ್ಯ ರಾತ್ರಿ ನಡೆದ ಡ್ರಗ್ಸ್ ಪೆಡ್ಲರ್ ಗಳನ್ನು ಹಿಡಿಯೋ ಆಪರೇಷನ್ ಇದಾಗಿದ್ದು, ಪೊಲೀಸರು ರೆಸಾರ್ಟ್‍ಗೆ ಎಂಟ್ರಿ ಕೊಡುತ್ತಿದ್ದಂತೆ ಯುವಕ, ಯುವತಿಯರು ಎದ್ನೋ ಬಿದ್ನೋ ಎಂದು ಓಡಿದ್ದಾರೆ. ಡ್ರಗ್ಸ್ ಸೇವಿಸಿ ಅರೆ ನಗ್ನ ಸ್ಥಿತಿಯಲ್ಲಿದ್ದ ಕೆಲವರನ್ನು ಖಾಕಿ ಪಡೆ ಹಿಡಿದು ಹಾಕಿದೆ. ರೇವ್ ಪಾರ್ಟಿಯ ಡ್ರಗ್ಸ್ ಜಾಲದಲ್ಲಿ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಡ್ರಗ್ಸ್ ಸೇವಿಸಿ ಅರೆನಗ್ನ ಸ್ಥಿತಿಯಲ್ಲಿ ಕುಣಿದಿದ್ದಲ್ಲದೆ ನಾವು ತಪ್ಪೇ ಮಾಡಿಲ್ಲ ಎಂದು ಪೋಸ್ ನೀಡಿದ್ದಾರೆ.

Comments

Leave a Reply

Your email address will not be published. Required fields are marked *