ರೈಲು ತಡವಾಗಿದ್ರಿಂದ ತಪ್ಪಿದ ಪೊಲೀಸ್ ಪರೀಕ್ಷೆ – ಆ.30 ರೊಳಗೆ ಅಗತ್ಯ ದಾಖಲೆ ಸಲ್ಲಿಸುವಂತೆ ಸೂಚನೆ

ಬೆಂಗಳೂರು: ರಾಣಿ ಚೆನ್ನಮ್ಮ ರೈಲು ತಡವಾಗಿದ್ದರಿಂದ ಪರೀಕ್ಷೆಗೆ ಹಾಜರಾಗಲು ಅಸಾಧ್ಯವಾದ ಅಭ್ಯರ್ಥಿಗಳಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‍ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆ ಸಲ್ಲಿಸಬೇಕಾದ ಮಾಹಿತಿ ಹೀಗಿದೆ:
1) ಅಭ್ಯರ್ಥಿ ಕ್ರಮ ಸಂಖ್ಯೆ
2) ಹೆಸರು
3) ಅರ್ಜಿ ಸಂಖ್ಯೆ
4)ಪರೀಕ್ಷಾ ಕೇಂದ್ರ & ವಿಳಾಸ
5) ಪ್ರಯಾಣದ ದಿನಾಂಕ
6) ರೈಲು ಕಾಯ್ದಿರಿಸಿದ ಮುಂಗಡ ಟಿಕೆಟ್ ಪ್ರತಿ & ಸಂಖ್ಯೆ
7) ಮೊಬೈಲ್ ಸಂಖ್ಯೆ

ಈ ನಮೂನೆಯಲ್ಲಿ ಭರ್ತಿಗೊಳಿಸಿ ಮೂಲಪ್ರತಿಯನ್ನು ಆಗಸ್ಟ್ 30ರೊಳಗೆ ಎಡಿಜಿಪಿ (ನೇಮಕಾತಿ)ರ ಬೆಂಗಳೂರು ಕಚೇರಿಗೆ ಸಲ್ಲಿಸಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಲು ಪ್ರಯಾಣಿಕರೇ ಕಾರಣ – ರೈಲ್ವೇ ಅಧಿಕಾರಿಗಳಿಂದ ಸ್ಪಷ್ಟನೆ

ಏನಿದು ಘಟನೆ?:
ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್ ರೈಲು ಆಗಸ್ಟ್ 5ರಂದು ಮಾರ್ಗ ಮಧ್ಯದಲ್ಲೇ ಸುಮಾರು 7 ಗಂಟೆಗಳ ಕಾಲ ನಿಂತ ಹಿನ್ನೆಲೆಯಲ್ಲಿ ಬೆಂಗಳೂರು ತೆರಳಬೇಕಿದ್ದ ಪರೀಕ್ಷಾರ್ಥಿಗಳು ಪರದಾಡಿದಾಡಿದ್ದಾರೆ. ಶನಿವಾರ ಮಧ್ಯಾಹ್ನ ಕೊಲ್ಹಾಪುರ ಬಿಟ್ಟ ಈ ಟ್ರೈನ್ ಇಂದು ಬೆಳಗ್ಗೆ 6.45ಕ್ಕೆ ಬೆಂಗಳೂರು ತಲುಪಬೇಕಿತ್ತು. ಆದ್ರೆ 7 ಗಂಟೆಗಳ ಕಾಲ ತಡವಾದ ಹಿನ್ನೆಲೆಯಲ್ಲಿ ಈ ಟ್ರೈನ್‍ಗಾಗಿ ಎಲ್ಲ ನಿಲ್ದಾಣಗಳಲ್ಲಿ ಕಾಯುತ್ತ ನಿಂತ ಪ್ರಯಾಣಿಕರು ರೋಸಿಹೋಗಿದ್ದರು. ಇದನ್ನೂ ಓದಿ: ಮಾರ್ಗ ಮಧ್ಯೆಯೇ ನಿಂತ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್- ಪರೀಕ್ಷಾರ್ಥಿಗಳ ಪರದಾಟ

ಬೆಳಗಾವಿ ಹಾಗೂ ಧಾರವಾಡ ಭಾಗದಿಂದ ಬೆಂಗಳೂರಿಗೆ ಡಿ.ಆರ್ ಪರೀಕ್ಷೆ ಬರೆಯಲು ಇದೇ ಟ್ರೈನ್ ನಲ್ಲಿ ಬರ್ತಾ ಇದ್ದ ಸಾವಿರಾರೂ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಬೆಂಗಳೂರು ತಲುಪಲಾಗದೇ ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಈಗ ಉತ್ತರ ಕರ್ನಾಟಕ ಭಾಗದ ಸಾವಿರಾರೂ ಅಭ್ಯರ್ಥಿಗಳು ತಮ್ಮ ತಪ್ಪು ಇಲ್ಲದೆ ಡಿ.ಆರ್ ಪರೀಕ್ಷೆಯಿಂದ ವಂಚಿತರಾಗುವಂತಾಗಿದ್ದು, ಈ ಕೂಡಲೇ ಪರೀಕ್ಷೆ ಮುಂದೂಡಬೇಕು. ಇಲ್ಲವೇ ರಾಣಿ ಚನ್ನಮ್ಮ ಟ್ರೈನ್‍ಗೆ ಟಿಕೆಟ್ ತೆಗೆಸಿದ್ದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಮರು ಅವಕಾಶ ಕಲ್ಪಿಸಿಕೊಡಬೇಕು ಅನ್ನೋ ಆಗ್ರಹಗಳು ಕೇಳಿ ಬಂದಿತ್ತು. ಬಳಿಕ ಅಭ್ಯರ್ಥಿಗಳ ಮನವಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮರು ಪರೀಕ್ಷ ನಡೆಸುವುದಾಗಿ ಭರವಸೆ ನೀಡಿದ್ದರು. ಇದನ್ನೂ ಓದಿ: ರೈಲು ವಿಳಂಬ: ಪೊಲೀಸ್ ಮರು ಪರೀಕ್ಷೆಗೆ ಅವಕಾಶ- ಸಿಎಂ ಎಚ್‍ಡಿಕೆ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *