ಮತ್ತೆ ನಗರದಲ್ಲಿ ಗುಂಡಿನ ಸದ್ದು – ಕುಖ್ಯಾತ ರೌಡಿಶೀಟರ್ ಸೈಕಲ್ ರವಿ ಕಾಲಿಗೆ ಗುಂಡು

ಬೆಂಗಳೂರು: ಸುಮಾರು 10 ಪ್ರಕರಣಗಳಲ್ಲಿ ಬೇಕಾಗಿರುವ ನಗರದ ಕುಖ್ಯಾತ ರೌಡಿಶೀಟರ್ ಸೈಕಲ್ ರವಿಗೆ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಪ್ರಕರಣಗಳಲ್ಲಿ ಆರೋಪಿಯಾಗಿರುವ ರೌಡಿ ಸೈಕಲ್ ರವಿ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಸತೀಶ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗೆ ಮುಂದಾದ ಸಿಸಿಬಿ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗು ಪಿಐ ಮಲ್ಲಿಕಾರ್ಜುನ್ ತಕ್ಷಣವೇ 2 ಸುತ್ತಿನ ಗುಂಡು ಹಾರಿಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ರವಿ ಮೇಲೆ ಸುಮಾರು 14 ಪೊಲೀಸ್ ಠಾಣೆಗಳಲ್ಲಿ ಆರೋಪಿಯಾಗಿದ್ದು, 6 ಕೊಲೆ ಪ್ರಕರಣ, 4 ಕೊಲೆ ಯತ್ನ ಪ್ರಕರಣಗಳು ದಾಖಲಾಗಿದೆ.

ಸೈಕಲ್ ರವಿ ಹಿನ್ನೆಲೆ ಏನು: ಆರೋಪಿ ರವಿ ಮೇಲೆ 1998 ರಲ್ಲಿ ಮೊದಲ ಬಾರಿಗೆ ಬನಶಂಕರಿಯಲ್ಲಿ ರೌಡಿಶೀಟರ್ ಪಟ್ಟ ದಾಖಲಾಗಿತ್ತು. ಕೆಪಿ ಅಗ್ರಹಾರದಲ್ಲಿ ಸಣ್ಣ ಪುಟ್ಟ ಗಲಾಟೆಯಲ್ಲಿ ಭಾಗಿಯಾಗಿದ್ದ ರವಿ, ಸುಬ್ರಹ್ಮಣ್ಯಪುರ ಮುಖ್ಯ ಕೇಂದ್ರವಾಗಿಸಿಕೊಂಡು ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಕೊಂಡಿದ್ದ. ಪ್ರಮುಖವಾಗಿ ಕೊಲೆ, ಕೊಲೆಯತ್ನ, ಅಪಹರಣ, ಧಮ್ಕಿ, ಹಫ್ತಾವಸೂಲಿ ಸೇರಿ 30 ಕ್ಕೂ ಹೆಚ್ಚು ಪ್ರಕರಣಗಳು ಆತನ ಮೇಲೆ ದಾಖಲಾಗಿದೆ.

ಕುಖ್ಯಾತ ರೌಡಿ ಲಿಂಗ ಮರ್ಡರ್, ಕೆಂಗೇರಿಯಲ್ಲಿ ಜಾನಿ, ಟಾಮಿ ಜೊಡಿ ಮರ್ಡರ್ ಸೇರಿದಂತೆ, ನಗರದಲ್ಲಿ ಜೆಪಿನಗರ ತಲಘಟ್ಟಪುರ, ಬನಶಂಕರಿ, ಸುಬ್ರಹ್ಮಣ್ಯಪುರ ಕೆಂಗೇರಿ ರಾಜರಾಜೇಶ್ವರಿ ನಗರ ಕೆಜಿ ನಗರ ಕೆಪಿ ಅಗ್ರಹಾರ ಸೇರಿ 14 ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳಿದಂತೆ ಸೈಕಲ್ ರವಿ ಬೆಂಗಳೂರಿನ ಮತ್ತೊಬ್ಬ ಕುಖ್ಯಾತ ರೌಡಿಶೀಟರ್ ಹೆಬ್ಬೆಟ್ ಮಂಜನ ಸ್ನೇಹಿತನಾಗಿದ್ದ.

https://www.youtube.com/watch?v=QeY2Qit2cpg

Comments

Leave a Reply

Your email address will not be published. Required fields are marked *