ಕನಸಿನಲ್ಲಿ ಕಾಣಿಸಿಕೊಳ್ಳುವ ದೆವ್ವಕ್ಕೆ ಹೆದರಿ ಪ್ರಾಣ ಬಿಟ್ಟ ಪೊಲೀಸ್

ಚೆನ್ನೈ: ಕಾನ್‌ಸ್ಟೇಬಲ್‌ ಒಬ್ಬರು ದೆವ್ವಕ್ಕೆ ಹೆದರಿ ತಮ್ಮ ಪೊಲೀಸ್ ಕ್ವಾರ್ಟರ್ಸ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ.

ಪ್ರಭಾಕರನ್ ಮೃತನಾಗಿದ್ದಾನೆ. ಈತ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ ಆಗಿ ಕೆಲಸ ಮಾಡುತ್ತಿದ್ದರು. ಇವರು ಕನಸಿನಲ್ಲಿ ಬರುವ ದೆವ್ವಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಡೆದಿದ್ದೇನು?: ಪ್ರಭಾಕರನ್ ಕನಸಿನಲ್ಲಿ ಬೆಂಕಿಯಲ್ಲಿ ಸುಟ್ಟುಹೋದ ಮಹಿಳೆಯೊಬ್ಬರು ಬಂದು ಕತ್ತು ಹಿಸುಕಲು ಪ್ರಯತ್ನಿಸಿದ್ದಳು. ಯಾಕೆ ತನಗೆ ಹೀಗೆ ಕನಸು ಬೀಳುತ್ತಿದೆ ಎಂಬ ಬಗ್ಗೆ ಪ್ರಭಾಕರನ್ ಜ್ಯೋತಿಷಿಯನ್ನು ಸಂಪರ್ಕಿಸಿದ್ದರು. ಅವರು ಇದು ಪ್ರೇತ ಕಾಟವಿರಬಹುದು ಎಂದಿದ್ದರು. ಹೀಗಾಗಿ 15 ದಿನಗಳ ಕಾಲ ಅನಾರೋಗ್ಯದ ರಜೆ ಪಡೆದಿದ್ದ ಪ್ರಭಾಕರನ್ ತನ್ನ ಪೊಲೀಸ್ ಕ್ವಾರ್ಟರ್ಸ್‍ನ ಪೂಜಾ ಕೊಠಡಿಯಲ್ಲಿ ಬೀಗ ಹಾಕಿಕೊಂಡಿದ್ದರು. ಇದನ್ನೂ ಓದಿ: ಹೊಸ ಇತಿಹಾಸ ಸೃಷ್ಟಿಸಿದ ಜಮೀರ್ ಪುತ್ರ ಝೈದ್ ಖಾನ್ ನಟನೆಯ ‘ಬನಾರಸ್’ ಚಿತ್ರ

POLICE JEEP

ಪ್ರಭಾಕರನ್ ಪತ್ನಿ ಮತ್ತು ಮಕ್ಕಳನ್ನು ಸಂಬಂಧಿಕರ ಮನೆಗೆ ಹೋಗಿದ್ದರು. ಇವರು ಮನೆಗೆ ಹಿಂತಿರುಗಿದಾಗ ಪ್ರಭಾಕರನ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ ಆಗಿದ್ದರು. ಕಡಲೂರು ಪೊಲೀಸರು ಪ್ರಭಾಕರನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ರಾಜ್ ಕುಟುಂಬದಲ್ಲಿ 20-23 ವರ್ಷಕ್ಕೆ ಮತ್ತೊಬ್ಬ ಸೂಪರ್ ಸ್ಟಾರ್ ಹುಟ್ಟಿಬರ್ತಾನೆ: ಜಗ್ಗೇಶ್

ಕನಸಿನಲ್ಲಿ ಕಾಡುತ್ತಿದ್ದ ದೆವ್ವದ ಭಯದಿಂದ ಪ್ರಭಾಕರನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕ್ವಾರ್ಟರ್ಸ್‍ನಲ್ಲಿ ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದರು ಎಂದು ಪ್ರಭಾಕರನ್ ಮನೆಯವರ ಬಳಿ ಹೇಳಿದ್ದಾರೆ. ಈ ಕುರಿತಾಗಿ ಕಡಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ತುಂಗಾನಗರ ಪೊಲೀಸರು ಏನು ದನ ಕಾಯುತ್ತಿದ್ದಾರಾ? : SPಗೆ ಈಶ್ವರಪ್ಪ ಪ್ರಶ್ನೆ

Comments

Leave a Reply

Your email address will not be published. Required fields are marked *