ವಿದ್ಯಾರ್ಥಿಗಳ ಪರದಾಟ ನೋಡಲಾಗದೇ ಪೊಲೀಸ್ ವಾಹನದಲ್ಲೇ ಪ್ರಯಾಣ – ಮಾನವೀಯತೆ ಮೆರೆದ ಗದಗ ಪೊಲೀಸ್ರು

ಗದಗ: ಭಾರತ್ ಬಂದ್ ಹಿನ್ನೆಲೆಯಲ್ಲಿ ವಾಹನಗಳಿಲ್ಲದೆ ಪರದಾಡುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ತಮ್ಮ ವಾಹನದಲ್ಲೇ ಕಾಲೇಜಿಗೆ ಕಳುಹಿಸುವ ಮೂಲಕ ಗದಗ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ಬಸ್ ಸಂಚಾರ ಇಲ್ಲದೇ ವಿದ್ಯಾರ್ಥಿಗಳು ವಾಹನಗಳಿಲ್ಲದೆ ಬಸ್ ನಿಲ್ದಾಣದಲ್ಲಿಯೇ ನಿಂತು ಪರದಾಡುತ್ತಿದ್ದರು. ಬಳಿಕ ಪೊಲೀಸರು ವಿದ್ಯಾರ್ಥಿಗಳ ಕಷ್ಟವನ್ನು ನೋಡಲಾಗದೇ ತಮ್ಮ ವಾಹನದಲ್ಲಿ ಅವರನ್ನು ಹತ್ತಿಸಿ ಕಳುಹಿಸಿದ್ದಾರೆ. ಈ ಮೂಲಕ ಗದಗ ಶಹರ, ಬೆಟಗೇರಿ, ಬಡಾವಣೆ ಹಾಗೂ ಗ್ರಾಮೀಣ ಪೊಲೀಸರ ಮಾನವೀಯತೆ ಮೆರೆದಿದ್ದಾರೆ. ಪೊಲೀಸರು ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ.

ಎರಡನೇ ದಿನದ ಭಾರತ್ ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ನಡುವೆ ಜಿಲ್ಲೆಯಲ್ಲಿ ಸಾರಿಗೆ ಸಂಚಾರ ಆರಂಭಗೊಂಡಿದ್ದು, ಪ್ರಯಾಣಿಕರು ಫುಲ್ ಖುಷಿಯಾಗಿದ್ದಾರೆ. ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಎಫ್.ಸಿ ಹಿರೇಮಠ ಅವರು ಗದಗ ಕೇಂದ್ರ ಬಸ್ ನಿಲ್ದಾಣದಿಂದ ಬಸ್ ಸಂಚಾರ ಆರಂಭಿಸುವಂತೆ ಆದೇಶ ನೀಡಿದ್ದರು. ಅದರಂತೆಯೇ ಗದಗನಿಂದ ಮುಂಡರಗಿ, ಗಜೇಂದ್ರಗಡ, ಹುಬ್ಬಳ್ಳಿ ಮತ್ತು ಹಾವೇರಿ ಮಾರ್ಗದಲ್ಲಿ ಬಸ್ ಸಂಚಾರ ಆರಂಭಗೊಂಡಿವೆ.

ಬಸ್ ಸಂಚಾರ ಆರಂಭದಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಸ್‍ಗಳಿಗೆ ಪೊಲೀಸ್ ಭದ್ರತೆಯನ್ನು ಒದಗಿಸಿದ್ದಾರೆ. ಮುಂದೆ ಪೊಲೀಸ್ ವಾಹನ ಹೋಗುತ್ತಿದ್ದರೆ ಅದರ ಹಿಂದೆ ಬಸ್ ಸಂಚರಿಸುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *