ಬೆಂಗಳೂರು: ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಗಳ ಮನೆಗಳ ಮೇಲೆ ದಾಳಿ ಮಾಡುವ ಮೂಲಕ ಚಳಿ ಬಿಡಿಸಿದ್ದಾರೆ.
ಪಶ್ಚಿಮ ವಿಭಾಗದ ಪೊಲೀಸರು ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಪೊಲೀಸ್ ಠಾಣಾ ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಡಿಸಿಪಿ ರವಿ ಚನ್ನಣ್ಣನವರ್ ಅವರ ನೇತೃದಲ್ಲಿ ಮುಂಜಾನೆ ನಾಲ್ಕು ಗಂಟೆಗೆ ಪೊಲೀಸರು ದಾಳಿ ಮಾಡಿದ್ದಾರೆ.

ಇನ್ನೂ ಕೆಲವು ದಿನಗಳಲ್ಲಿ ಲೋಕಸಭಾ ಚುನಾವಣಾ ದಿನಾಂಕ ಫೋಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಡಿಸಿಪಿ ರವಿ ಚನ್ನಣ್ಣನವರ್ ಅವರು ರೌಡಿಶೀಟರ್ ಗಳಿಗೆ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾಗಬಾರದೆಂದು ಎಚ್ಚರಿಸಲು ಸೂಚಿಸಿದ್ದರು. ಅವರ ಸೂಚನೆ ಮೇರೆಗೆ ಪೊಲೀಸರು ರೌಡಿಗಳು ಮಲಗಿದ್ದಾಗಲೇ ಅವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಕೆಲ ರೌಡಿಗಳ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದ್ದವು. ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಮಾರು 150 ಮಂದಿ ರೌಡಿಶೀಟರ್ ಗಳ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply