ಉಗ್ರರ ಗುಂಡಿನ ದಾಳಿಗೆ ಪೊಲೀಸ್‌ ಸಿಬ್ಬಂದಿ ಹುತಾತ್ಮ – 7 ವರ್ಷದ ಮಗಳಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಪೊಲೀಸ್‌ ಹುತಾತ್ಮರಾಗಿದ್ದು, ಅವರ ಏಳು ವರ್ಷದ ಮಗಳು ದಾಳಿಯಿಂದ ಗಾಯಗೊಂಡಿದ್ದಾಳೆ.

ಮಂಗಳವಾರ ಉಗ್ರರು ಶ್ರೀನಗರದಲ್ಲಿದ್ದ ಪೊಲೀಸ್‌ ಮನೆಯ ಹೊರಗಿನಿಂದ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದ ಮೃತಪಟ್ಟ ಪೊಲೀಸ್‌ ಸೌರಾ ಪ್ರದೇಶದ ಸೈಫುಲ್ಲಾ ಖಾದ್ರಿ ಎಂದು ಗುರುತಿಸಲಾಗಿದೆ. ಪೊಲೀಸ್‌ ಪುತ್ರಿ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ಸಾವು ಪ್ರಕರಣ – ಪತಿಗೆ 10 ವರ್ಷ ಜೈಲು, 12 ಲಕ್ಷ ದಂಡ

ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಐವರು ‘ಹೈಬ್ರಿಡ್’ ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಸೋಮವಾರ ತಿಳಿಸಿದ್ದರು. ಅವರಲ್ಲಿ ಮೂವರು ಕಳೆದ ತಿಂಗಳು ಬಾರಾಮುಲ್ಲಾ ಜಿಲ್ಲೆಯಲ್ಲಿ ಸರಪಂಚ್‌ನಲ್ಲಿ ನಡೆದ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

‘ಹೈಬ್ರಿಡ್’ ಭಯೋತ್ಪಾದಕರು ಎಂದರೆ ಭಯೋತ್ಪಾದಕರ ಪಟ್ಟಿಗೆ ಸೇರದ ಆದರೆ ಭಯೋತ್ಪಾದಕ ದಾಳಿಯನ್ನು ನಡೆಸುವಷ್ಟು ಸಾಮರ್ಥ್ಯ ಹೊಂದಿರುತ್ತಾರೆ. ಇದನ್ನೂ ಓದಿ: ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತ

Comments

Leave a Reply

Your email address will not be published. Required fields are marked *