ಅಧಿಕಾರ ಇರ್ಲಿ ಇಲ್ಲದೇ ಇರಲಿ ನಾನು ರಾಹುಲ್, ಪ್ರಿಯಾಂಕಾ ಜೊತೆ ಇರುತ್ತೇನೆ: ಸಿಧು

ಚಂಡೀಗಢ: ಅಧಿಕಾರ ಇರಲಿ ಇಲ್ಲದೇ ಇರಲಿ ನಾನು ಮಾತ್ರ ಯಾವತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಜೊತೆ ಇರುತ್ತೇನೆ ಎಂದು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಸರ್ಕಾರದಲ್ಲಿ ಉಂಟಾದ ಭಿನ್ನಾಭಿಪ್ರಾಯಗಳ ಮಧ್ಯೆ ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನಕ್ಕೆ ಕೆಲದಿನಗಳ ಹಿಂದೆ ಸಿಧು ರಾಜೀನಾಮೆ ನೀಡಿದ್ದರು. ಬಳಿಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಕೂಡ ಪಕ್ಷದಲ್ಲಿ ಮುಂದುವರಿಯುದಾಗಿ ತಿಳಿಸಿದ್ದರು. ಇದೀಗ ಸಿಧು ಇಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ವೇದ ವಾಕ್ಯಗಳನ್ನು ಟ್ವಿಟ್ಟರ್‍ ನಲ್ಲಿ ಪೋಸ್ಟ್ ಮಾಡುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಇದನ್ನೂ ಓದಿ: ನವಜೋತ್ ಸಿಂಗ್ ಸಿಧುನಂತೆ ಕನ್ಹಯ್ಯ ಕುಮಾರ್ ಕಾಂಗ್ರೆಸ್ಸನ್ನು ನಾಶ ಮಾಡುತ್ತಾರೆ: ಆರ್​​ಜೆಡಿ

ನನ್ನೊಂದಿಗೆ ಅಧಿಕಾರ ಇದ್ದರೂ ಇಲ್ಲದಿದ್ದರೂ ನಾನು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಜೊತೆ ಇರುತ್ತೇನೆ. ಕೆಲ ದುಷ್ಟ ಶಕ್ತಿಗಳು ನನ್ನನ್ನು ತುಳಿಯಲು ಪ್ರಯತ್ನಿಸುತ್ತಿದೆ ಆದರೆ ನನ್ನೊಂದಿಗಿರುವ ಪಂಜಾಬ್ ಜನತೆಯ ಆರ್ಶೀವಾದದಿಂದ ಅದನ್ನು ಹಿಮ್ಮೆಟ್ಟಿಸುತ್ತೇನೆ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಪಂಜಾಬ್‍ನಲ್ಲಿ ಹೊಸ ಪಕ್ಷ ಸ್ಥಾಪಿಸಲು ಹೊರಟ್ರಾ ಅಮರೀಂದರ್ ಸಿಂಗ್?

Comments

Leave a Reply

Your email address will not be published. Required fields are marked *