ಪವರ್ ಕಟ್ – 4 ನವಜಾತ ಶಿಶುಗಳು ಸರ್ಕಾರಿ ಆಸ್ಪತ್ರೆಯಲ್ಲೇ ಸಾವು

ರಾಯ್ಪುರ: ವಿದ್ಯುತ್ ಕಡಿತದಿಂದಾಗಿ (Power Cut) 4 ಕಂದಮ್ಮಗಳು (Babies) ಆಸ್ಪತ್ರೆಯಲ್ಲೇ (Hospital) ಸಾವನ್ನಪ್ಪಿರುವ ಘಟನೆ ಸೋಮವಾರ ಛತ್ತೀಸ್‌ಗಢದಲ್ಲಿ (Chhattisgarh) ನಡೆದಿದೆ.

ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವಿಶೇಷ ನವಜಾತ ಶಿಶು ಆರೈಕೆ ಘಟಕದಲ್ಲಿದ್ದ (SNCU) 4 ನವಜಾತ ಶಿಶುಗಳು (Newborn Babies) ಸೋಮವಾರ ಸಾವನ್ನಪ್ಪಿದ್ದು, ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವರದಿಗಳ ಪ್ರಕಾರ ಅಂಬಿಕಾಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (GMCH) ಮುಂಜಾನೆ 5:30 ರಿಂದ 8:30ರ ನಡುವೆ ಶಿಶುಗಳ (Infants) ಸಾವು ಸಂಭವಿಸಿದೆ. ವೆಂಟಿಲೇಟರ್‌ನಲ್ಲಿದ್ದ ಶಿಶುಗಳೇ ಸಾವನ್ನಪ್ಪಿದ್ದು, ಇದಕ್ಕೆ ವಿದ್ಯುತ್ ಕಡಿತವೇ ಕಾರಣ ಎಂದು ಮೃತ ಕಂದಮ್ಮಗಳ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ ಶಿಶುಗಳ ಸಾವಿಗೆ ಹಾಗೂ ವಿದ್ಯುತ್ ಕಡಿತಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಆಡಳಿತ ಸಮರ್ಥಿಸಿಕೊಂಡಿದೆ. ಇದನ್ನೂ ಓದಿ: SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ‌ಪ್ರಕಟ

ಪ್ರಾಥಮಿಕ ಮಾಹಿತಿಯ ಪ್ರಕಾರ 4 ಶಿಶುಗಳು ಮೊದಲೇ ಗಂಭೀರ ಸ್ಥಿತಿಯಲ್ಲಿದ್ದು, ಅವನ್ನು ಎಸ್‌ಎನ್‌ಸಿಯುಗೆ ದಾಖಲಿಸಲಾಗಿತ್ತು. ಅದರಲ್ಲಿ 2 ಶಿಶುಗಳು ವೆಂಟಿಲೇಟರ್ ಬೆಂಬಲದಲ್ಲಿದ್ದವು. ಮಧ್ಯರಾತ್ರಿ 1 ಗಂಟೆಯಿಂದ 1:30ರ ವರೆಗೆ ಆಸ್ಪತ್ರೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಆದರೆ ಕೆಲವೇ ಹೊತ್ತಿನಲ್ಲಿ ಅದನ್ನು ಸರಿಪಡಿಸಲಾಗಿದೆ.

ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದರೂ ಅದು ಎಸ್‌ಎನ್‌ಸಿಯ ಮೇಲೆ ಪರಿಣಾಮ ಬೀರುವುದಿಲ್ಲ. ಏಕೆಂದರೆ ಅಲ್ಲಿಗೆ ಪರ್ಯಾಯ ವಿದ್ಯುತ್ ಸರಬರಾಜಿನ ವ್ಯವಸ್ಥೆ ಮಾಡಲಾಗಿದೆ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ. ಆದರೆ ಆಸ್ಪತ್ರೆಯಲ್ಲಿ ರಾತ್ರಿ 3 ಗಂಟೆಗೂ ಹೆಚ್ಚು ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಮೃತ ಶಿಶುಗಳ ಪೋಷಕರು ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಛತ್ತೀಸ್‌ಗಢ ರಾಜ್ಯಪಾಲ ಅನುಸೂಯಾ ಉಯ್ಕೆ, ಶಿಶುಗಳ ಸಾವಿನ ಕಾರಣವನ್ನು ತನಿಖೆ ಮಾಡಿ, ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮೃತರ ಕುಟುಂಬಕ್ಕೆ ಪರಿಹಾರವನ್ನು ನೀಡಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ. ಇದನ್ನೂ ಓದಿ: JNUನಲ್ಲಿ ಬ್ರಾಹ್ಮಣ ವಿರೋಧಿ ಗೋಡೆ ಬರಹ ಖಂಡನೀಯ – ಅಖಿಲ ಭಾರತ ಬ್ರಾಹ್ಮಣ ಮಹಾಸಂಘ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *