ಬಾಗಲಕೋಟೆ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇಂದು ಬಾದಾಮಿಯಲ್ಲಿರೋ ಬನಶಂಕರಿ ದೇವಿಯ ದರ್ಶನ ಪಡೆದುಕೊಂಡು, ದೇವಿಯ ಅನುಗ್ರಹ ಇರಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
`ನಟ ಸಾರ್ವಭೌಮ’ ಚಿತ್ರದ ಶೂಟಿಂಗ್ ನಲ್ಲಿರುವ ಪುನೀತ್, ಕಳೆದ ಐದು ದಿನಗಳಿಂದ ಬಾದಾಮಿಯಲ್ಲೇ ತಂಗಿದ್ದರು. ಉತ್ತರ ಕರ್ನಾಟಕದಲ್ಲಿ ಬನಶಂಕರಿ ದೇವಿಯ ಮಹತ್ವ ಇರುವುದರಿಂದ ಶೂಟಿಂಗ್ ನ ಬಿಡುವಿನ ವೇಳೆಯಲ್ಲಿ ಬನಶಂಕರಿ ದೇವಸ್ಥಾನಕ್ಕೆ ಆಗಮಿಸಿ, ದೇವಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ವೇಳೆ ಅಭಿಮಾನಿಗಳು ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದರು.
ಮಹಾಕೂಟದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ನಟ ಪುನೀತ್ ಅಗತ್ಯ ಇರುವ ಕಡೆ ಶೂಟಿಂಗ್ ಮುಗಿಸಲಾಗಿದೆ. ಉಳಿದ ಶೂಟಿಂಗ್ ಅವರ ಅನುಪಸ್ಥಿತಿಯಲ್ಲಿ ನಡೆಯಲಿದೆ. ಅವರ ರೂಲ್ ಮುಗಿದ ಹಿನ್ನೆಲೆ ಪುನೀತ್ ಹುಬ್ಬಳ್ಳಿ ಮಾರ್ಗವಾಗಿ ವಿಮಾನ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ. ತೆರಳುವ ಮುಂಚೆ ದೇವಿಯ ಆರ್ಶಿವಾದ ಪಡೆದುಕೊಂಡಿದ್ದಾರೆ
ಪುನೀತ್ ರಾಜ್ ಕುಮಾರ್ ಅಭಿನಯದ `ನಟ ಸಾರ್ವಭೌಮ’ ಸಿನಿಮಾವನ್ನು ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದಾರೆ. ರಾಕ್ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದಾರೆ. ಈ ಹಿಂದೆ ಪವನ್ ಒಡೆಯರ್, ಪುನೀತ್ ರಾಜ್ ಕುಮಾರ್ ಅವರ `ರಣವಿಕ್ರಮ’ ಚಿತ್ರವನ್ನು ನಿರ್ದೇಶಿಸಿದ್ದರು.

Leave a Reply