ಪ್ರಭಾಸ್ ಜೊತೆ ಮದ್ವೆ- ಮೌನ ಮುರಿದ ನಿಹಾರಿಕಾ

ಹೈದರಾಬಾದ್: ಬಾಹುಬಲಿ ಖ್ಯಾತಿಯ ಪ್ರಭಾಸ್ ಇತ್ತೀಚೆಗೆ ವಿವಾಹದ ವಿಚಾರವಾಗಿ ಸುದ್ದಿಯಾಗುತ್ತಿದ್ದು, ಈ ಹಿಂದೆ ಕನ್ನಡತಿ ಅನುಷ್ಕಾ ಶೆಟ್ಟಿ ಜೊತೆ ಸುತ್ತಾಡುವ ಮೂಲಕ ಇವರಿಬ್ಬರು ವಿವಾಹವಾಗಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ನಂತರ ಸ್ವತಃ ಅನುಷ್ಕಾ ಶೆಟ್ಟಿ ಅವರೇ ಈ ಕುರಿತು ಪ್ರತಿ ಪ್ರತಿಕ್ರಿಯಿಸಿ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದು ಸ್ಪಷ್ಟಪಡಿಸಿದ್ದರು. ಇದೀಗ ಮೆಗಾ ಫ್ಯಾಮಿಲಿ ಜೊತೆಗೆ ಸಂಬಂಧ ಬೆಳೆಸುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿದೆ.

ಹೌದು ಅನುಷ್ಕಾ ಶೆಟ್ಟಿ ಬಳಿಕ ಇದೀಗ ಪ್ರಭಾಸ್ ಮದುವೆ ಬಗ್ಗೆ ಮತ್ತೊಂದು ಸುದ್ದಿ ಹಬ್ಬಿದ್ದು, ಇದೀಗ ಚಿರಂಜೀವಿ ಸಹೋದರ ನಾಗಬಾಬು ಪುತ್ರಿ, ನಟಿ ನಿಹಾರಿಕಾ ಜೊತೆ ಯಂಗ್ ರೆಬೆಲ್ ಸ್ಟಾರ್ ಹೆಸರು ಕೇಳಿ ಬಂದಿದೆ. ಕೆಲ ದಿನಗಳ ಹಿಂದೆ ಟಾಲಿವುಡ್ ಅಂಗಳದಲ್ಲಿ ಈ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ನಟಿ ನಿಹಾರಿಕಾ, ಆ ರೀತಿ ಏನೂ ಇಲ್ಲ ಎಂದಿದ್ದರು. ಸ್ವತಃ ಮೆಗಾ ಸ್ಟಾರ್ ಚಿರಂಜೀವಿ ಪ್ರತಿಕ್ರಿಯಿಸಿ ಈ ಕುರಿತು ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ಇದೆಲ್ಲ ಸುಳ್ಳು ಸುದ್ದಿ ಅಲ್ಲದೆ ನಮ್ಮ ಕುಟುಂಬಕ್ಕೆ ಹೊಸದೇನೂ ಅಲ್ಲ ಬಿಡಿ ಎಂದಿದ್ದರು. ಈಗ ಮತ್ತೆ ಅದೇ ಸುದ್ದಿಗೆ ಜೀವ ಬಂದಿದೆ.

ಲಾಕ್‍ಡೌನ್ ಹಿನ್ನೆಲೆ ಬುಹುತೇಕ ನಟ ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಬ್ಯುಸಿಯಾಗಿದ್ದು, ಅಭಿಮಾನಿಗಳ ಜೊತೆ ಬೆರೆಯುತ್ತಿದ್ದಾರೆ. ಅದೇ ರೀತಿ ನಟಿ ನಿಹಾರಿಕಾ ಸಹ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬ ಪ್ರಭಾಸ್‍ರನ್ನು ನೀವು ವಿವಾಹವಾಗುತ್ತೀರಾ ಎಂದು ಪ್ರಶ್ನಿಸಿದ್ದಾನೆ. ಇದಕ್ಕೆ ಉತ್ತರಿಸಿದ ನಿಹಾರಿಕಾ, ಇದೆಲ್ಲ ಸುಳ್ಳು ಸುದ್ದಿ, ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟಿವಿ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿದ್ದ ನಿಹಾರಿಕಾ, ‘ಒಕ ಮನಸು’ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟರು. ಬಳಿಕ ಹ್ಯಾಪಿ ವೆಡ್ಡಿಂಗ್, ಸೂರ್ಯಕಾಂತಂ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅಲ್ಲದೆ ಕಳೆದ ವರ್ಷ ಬಿಡುಗಡೆಯಾದ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಸೈರಾ ನರಸಿಂಹ ರೆಡ್ಡಿ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Comments

Leave a Reply

Your email address will not be published. Required fields are marked *