ದೀಪಾವಳಿಗೆ ರಿಲೀಸ್ ಆಯಿತು ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರದ ಪೋಸ್ಟರ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಮಾಫಿಯಾ” (Mafia) ಚಿತ್ರದ ನೂತನ ಪೋಸ್ಟರ್ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಿದೆ. ವಿಭಿನ್ನ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿದ್ದಾರೆ. ಲೋಹಿತ್ ಹೆಚ್ (Lohit) ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶಗಳು ಸಾಹಸಪ್ರಿಯರಿಗೆ ಹೆಚ್ಚು ಪ್ರಿಯವಾಗಲಿದೆ.

ನಾಯಕ ಪ್ರಜ್ವಲ್ ದೇವರಾಜ್ (Prajwal Devaraj) ಅಭಿನಯದ 35ನೇ ಚಿತ್ರ “ಮಾಫಿಯಾ”. ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್ ನಲ್ಲಿ ಪ್ರಜ್ವಲ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಸಹ ಮಾಡಿಕೊಂಡಿದ್ದಾರೆ. ಈಗಾಗಲೇ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾರ್ಗ ಬಾಕಿಯಿದೆ. ದೀಪಾವಳಿ ನಂತರ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ‌. ಇದನ್ನೂ ಓದಿ:ಚೇತನ್ ಕಾಂಟ್ರವರ್ಸಿಗೆ ಪ್ರಗತಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

 

“ಮಾಫಿಯಾ”ಗಾಗಿ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಸೆಟ್ ಸಹ ನಿರ್ಮಾಣ ಮಾಡಲಾಗಿತ್ತು. ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ (Aditi Prabhudev), ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *