ಕರ್ನಾಟಕ ಸರ್ಕಾರ ಭ್ರಷ್ಟ ಎಂದ ತೇಜಸ್ವಿ ವಿರುದ್ಧ ಗುಡುಗಿದ ಪ್ರಜ್ವಲ್

– ಸಂಸತ್‍ನಲ್ಲಿ ಸದ್ದು ಮಾಡಿತು ಐಎಂಎ ಹಗರಣ

ನವದೆಹಲಿ: ಕರ್ನಾಟಕ ಸರ್ಕಾರ ಭ್ರಷ್ಟ ಸರ್ಕಾರ ಎಂದು ಆರೋಪಿಸಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಗುಡುಗಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಭಾಷಣ ಮಾಡಿದ ಪ್ರಜ್ವಲ್ ರೇವಣ್ಣ ಅವರು, ಕರ್ನಾಟಕದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಸಂಸತ್‍ನ ಎಲ್ಲ ಸದಸ್ಯರು ಕರ್ನಾಟಕ ಎದುರಿಸುತ್ತಿರುವ ನೀರಿನ ಸಮಸ್ಯೆ ಪರಿಹಾರಕ್ಕೆ ಶ್ರಮಿಸಬೇಕು ಎಂದು ಮನವಿ ಮಾಡಿಕೊಂಡರು.

ಮಂಡ್ಯ ಭಾಗದ ರೈತರಿಗೆ ಎರಡು ಟಿಎಂಸಿ ನೀರು ಕೊಡಿ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಇದುವರೆಗೂ 1,600 ರೈತರು ಸಾವನ್ನಪ್ಪಿದ್ದಾರೆ. ತಮಿಳುನಾಡು ಕೂಡ ನೀರು ಕೇಳುತ್ತಿದೆ. ಮಂಡ್ಯದ ಜನರಿಗೆ ಮಾನವೀಯತೆ ದೃಷ್ಟಿಯಿಂದ ನೀರು ಬಿಡಿ. ಕೇಂದ್ರ ಸಚಿವ ಸದಾನಂದಗೌಡ ಅವರ ಮೂಲಕ ಒತ್ತಾಯಿಸುತ್ತೇನೆ ಎಂದರು.

ಸಂಸದರೊಬ್ಬರು ಕರ್ನಾಟಕ ಸರ್ಕಾರ ಸರ್ಕಾರ ಭ್ರಷ್ಟ ಸರ್ಕಾರ ಅಂತ ಹೇಳಿದ್ದಾರೆ. ಈ ಮೂಲಕ ಸಂಸತ್ ಅನ್ನು ದಾರಿ ತಪ್ಪಿಸುತ್ತಿದ್ದಾರೆ. ಐಎಂಎ ಹಗರಣದ ಸಂಬಂಧ ಕಾಂಗ್ರೆಸ್ ಒಬ್ಬ ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಲಾಗಿದೆ ಎಂದು ಪ್ರಜ್ವಲ್ ರೇವಣ್ಣ ಹೇಳಿದರು.

ಈ ವೇಳೆ ಬಿಜೆಪಿ ನಾಯಕರು ಧ್ವನಿ ಏರಿಸಿದಾಗ ಪ್ರತಾಪ್ ಸಿಂಹ ಅವರೇ ನೀವು ಸುಮ್ಮನಿರೀ ಎಂದು ಪ್ರಜ್ವಲ್ ರೇವಣ್ಣ ಕಿಡಿಕಾರಿದರು.

ಸಂಸದೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಸರ್ಕಾರದ ಸಚಿವರು ಐಎಂಎ ಹರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಯಾಕೆ ವಜಾ ಮಾಡುತ್ತಿಲ್ಲ. ನೀವು ಮಾಜಿ ಹಾಗೂ ಹಾಲಿ ಸಚಿವರನ್ನು ರಕ್ಷಣೆ ಮಾಡುತ್ತಿರುವಿರಿ ಎಂದು ಹೇಳಿ ತಿರುಗೇಟು ನೀಡಿದರು.

Comments

Leave a Reply

Your email address will not be published. Required fields are marked *