ಪ್ರಮೋದ್ ಮುತಾಲಿಕ್, ಚೈತ್ರಾ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿದ ಡಿಸಿ

ಕಲಬುರಗಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರನ್ನು ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧವನ್ನು ಡಿಸಿ ಹೇರಿದ್ದಾರೆ.

ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಸಿಆರ್‌ಪಿಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ಅನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ನಿನ್ನೆ ಆದೇಶ ಹೊರಡಿಸಿದ್ದಾರೆ. ಇದಲ್ಲದೆ ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ.27 ರಿಂದ ಮಾ.3ರ ವರೆಗೆ ಆಳಂದ ತಾಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ:  ಫೋನ್‌ನಲ್ಲಿ ಮಾತನಾಡುವಾಗ ಬಾಂಬ್ ಹಾಕುತ್ತಿದ್ದಾರೆ ಎಂದು ಬಂಕರ್‌ಗೆ ಓಡಿ ಹೋದ: ಪೋಷಕರ ಅಳಲು

ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಮಾರ್ಚ್ 1 ರಂದು ಸಂದಲ್ ಮತ್ತು ಶಬ್-ಏ-ಬರಾತ್ ಕಾರ್ಯಕ್ರಮ ಇದ್ದು, ಅದೇ ದಿನ ಮಹಾಶಿವರಾತ್ರಿ ಇರುವುದರಿಂದ ದರ್ಗಾದಲ್ಲಿರುವ ಶಿವಲಿಂಗದ ಶುದ್ಧೀಕರಣ ಕಾರ್ಯಕ್ರಮಕ್ಕೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಕರೆ ನೀಡಿದಲ್ಲದೆ, ಫೆ.27ಕ್ಕೆ ಆಳಂದ ಚಲೋ ಕಾರ್ಯಕ್ರಮಕ್ಕೆ ಕರೆ ನೀಡಿದ್ದಾರೆ.

ಈ ಹಿನ್ನೆಲೆ ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವ ಕಾರಣ ಪ್ರಮೋದ್ ಮುತಾಲಿಕ್ ತಂದೆ ಹನುಮಂತರಾವ್ ಮುತಾಲಿಕ್, ಕು.ಚೈತ್ರಾ, ತಂ.ಬಾಲಕೃಷ್ಣ ನಾಯಕ್ ಅವರನ್ನು ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಮತ್ತು ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಆಳಂದ ತಾಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ:  ಆನ್‍ನೈಲ್‍ನಲ್ಲಿ 100ಕ್ಕೂ ಹೆಚ್ಚು ಜನರಿಗೆ ವಂಚನೆ – 4 ಮಂದಿ ಅರೆಸ್ಟ್

ಏಕೆ ಈ ನಿರ್ಧಾರ?
ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ಪುರಾತನ ಕಾಲದಿಂದಲೂ ಸಹ ಶಿವಲಿಂಗವಿದೆ. ಆದರೆ ಕಳೆದ ಮೂರು ತಿಂಗಳ ಹಿಂದೆ ಲಿಂಗದ ಮೇಲೆ ಕೆಲ ಕಿಡಿಗೇಡಿಗಳು ಮೂತ್ರ ವಿಸರ್ಜನೆ ಮಾಡಿದ್ದರು. ಅದಾದ ಬಳಿಕ ಶಿವಲಿಂಗವನ್ನು ಕಾಶಿದಿಂದ ತೀರ್ಥ ಹಾಗೂ ಗಂಗಾಜಲದಿಂದ ಶುಚಿ ಮಾಡಲು ಹಿಂದೂಪರ ಸಂಘಟನೆಗಳು ಆಗ್ರಹಿಸಿದ್ದವು.

ಬಳಿಕ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಶಿವಾಚಾರ್ಯರು ಹಿಂದೂ ಸಂಘಟನೆಗಳಿಗೆ ಮಾರ್ಚ್ 27 ರಿಂದ ಆಳಂದ ಚಲೋ ಅಭಿಯಾನ ಹಮ್ಮಿಕೊಂಡಿದ್ದರು. ಆದರೆ ದರ್ಗಾ ಪ್ರದೇಶದಲ್ಲಿ ಲಿಂಗ ಇರುವ ಹಿನ್ನೆಲೆ ಎರಡು ಕೋಮಿನ ಮಧ್ಯೆ ಜಗಳ ನಡುಯುವ ಸಾಧ್ಯತೆಯಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಆಳಂದ ಚಲೋ ಅಭಿಯಾನಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.

Comments

Leave a Reply

Your email address will not be published. Required fields are marked *