ಪ್ರಭಾಸ್ ಅಭಿಮಾನಿಗಳ ನಿದ್ದೆಗೆಡಿಸಿದ ಪ್ರಶಾಂತ್ ನೀಲ್: ನಾಳೆ ಟೀಸರ್ ರಿಲೀಸ್

ನಾಳೆ ಬೆಳಗ್ಗೆ 5.12ಕ್ಕೆ ಪ್ರಭಾಸ್ ನಟನೆಯ ‘ಸಲಾರ್’ (Salaar)  ಸಿನಿಮಾದ ಟೀಸರ್ ರಿಲೀಸ್ ಮಾಡುತ್ತಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್. ನಾಳೆ ಈ ಸಮಯವನ್ನು ಯಾಕೆ ನಿಗದಿ ಮಾಡಿದರೋ ಗೊತ್ತಿಲ್ಲ. ಆದರೆ, ಪ್ರಭಾಸ್ ಅಭಿಮಾನಿಗಳ ಮಾತ್ರ ನಿದ್ದೆ ಬಿಟ್ಟು ಟೀಸರ್ (Teaser) ಗಾಗಿ ಕಾಯುತ್ತಿದ್ದಾರೆ. ಬೆಳ್ಳಂಬೆಳಗ್ಗೆ ಎದ್ದು ಟೀಸರ್ ನೋಡುವುದಕ್ಕಾಗಿ ಅಭಿಮಾನಿಗಳು ಸಿದ್ದತೆ ಕೂಡ ಮಾಡಿಕೊಂಡಿದ್ದಾರೆ.

ಟೀಸರ್ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಆಗಲು ಸಾಮಾನ್ಯವಾಗಿ ಸಾಯಂಕಾಲದ ಸಮಯವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಅಥವಾ ಬೆಳಗ್ಗೆ ಹತ್ತು ಗಂಟೆಯ ನಂತರ ಫಿಕ್ಸ್ ಮಾಡುತ್ತಾರೆ. ಆದರೆ, ಸಲಾರ್ ಟೀಮ್ ಕೋಳಿ ಕೂಗುವ ಮುನ್ನ ವೇಳೆ ಆಯ್ಕೆ ಮಾಡಿಕೊಂಡಿದೆ. ಇದಕ್ಕೆ ಕಾರಣ ಏನು ಎನ್ನುವುದನ್ನು ಅದು ತಿಳಿಸಿಲ್ಲ. ಹಾಗಾಗಿ ಪ್ರಭಾಸ್ (Prabhas) ಅಭಿಮಾನಿಗಳು ವೇಳೆಯ ಕುರಿತಾಗಿ ಪ್ರಶ್ನೆ ಮಾಡಿದ್ದಾರೆ.

ಸಲಾರ್ ಚಿತ್ರ ಸೆಪ್ಟೆಂಬರ್ 28ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರ ಹೇಗೆ ಮೂಡಿಬಂದಿರಬಹುದು ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದು, ಆ ಎಲ್ಲಾ ಕುತೂಹಲಗಳಿಗೆ ಜುಲೈ 6ರ ಗುರುವಾರ ತೆರೆಬೀಳಲಿದೆ.

ಕಳೆದ ವರ್ಷ ಭಾರತೀಯ ಚಿತ್ರರಂಗಕ್ಕೆ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್‌ಬಸ್ಟರ್ ಚಿತ್ರಗಳನ್ನು ನೀಡಿದಂತಹ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್ (Hombale Films), ‘ಸಲಾರ್’ ಚಿತ್ರವನ್ನು ನಿರ್ಮಿಸಿದೆ. ಕೆಜಿಎಫ್ ನಂತರ ಪ್ರಶಾಂತ್ ನೀಲ್ (Prashant Neel) ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.

 

ಕಳೆದ ಎರಡು ವರ್ಷಗಳಿಂದ ಚಿತ್ರತಂಡದವರು ಚಿತ್ರೀಕರಣ ಮಾಡುತ್ತಿದ್ದರೂ, ಚಿತ್ರದ ಬಗ್ಗೆ ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿಲ್ಲ. ಹಾಗಾಗಿ, ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.  ‘ಸಲಾರ್’ ಚಿತ್ರದಲ್ಲಿ ಪ್ರಭಾಸ್ ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಪ್ರಮೋದ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಕನ್ನಡದ ಭುವನ್ ಗೌಡ ಅವರ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]