ಬೆಂಗಳೂರು: ಅಮೆರಿಕಾ ಅಧ್ಯಕ್ಷ ಟ್ರಂಪ್ ಭಾರತ ಭೇಟಿಯಾಗುವ ವಿಚಾರಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮೊದಲಿಗೆ “ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತದ ಭೇಟಿ ವೇಳೆ ಅಹ್ಮದಾಬಾದ್ ನ ಸ್ಲಂಗಳು ಕಾಣದಂತೆ ಪ್ರಧಾನಿ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ. ಆದರೆ ಅಧಃಪತನಕ್ಕೆ ಕುಸಿದಿರುವ ದೇಶದ ಆರ್ಥಿಕತೆ ಕಾಣಿಸದಂತೆ ಮೋದಿ ಅವರು ಯಾವ ಗೋಡೆ ಕಟ್ಟುತ್ತಾರೆ?” ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಫೆ.24, 25ರಂದು ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಟ್ರಂಪ್

ಮತ್ತೊಂದು ಟ್ವೀಟ್ ಮಾಡಿ, “ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ಮರೆಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ? ಮೋದಿ ಅವರೇ ಉತ್ತರಿಸುವಿರಾ?” ಎಂದು ಅಮೆರಿಕಾ ಅಧ್ಯಕ್ಷ ಟ್ರಂಪ್ ಭಾರತ ಭೇಟಿಯಾಗುವ ವಿಚಾರಕ್ಕೆ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧ್ಯಕ್ಷ ಟ್ರಂಪ್?
ಇದೇ 24 ಮತ್ತು 25ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಡೊನಾಲ್ಡ್ ಟ್ರಂಪ್ ಮತ್ತು ಪತ್ನಿ ಮೆಲಾನಿಯಾ ಟ್ರಂಪ್ ಭಾರತಕ್ಕೆ ತೆರಳುತ್ತಾರೆ. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಪ್ರವಾಸದಲ್ಲಿ ಟ್ರಂಪ್ ಮತ್ತು ಅವರ ಪತ್ನಿ ದೆಹಲಿ ಮತ್ತು ಅಹಮದಾಬಾದ್‍ಗೆ ಭೇಟಿ ನೀಡಲಿದ್ದಾರೆ. ಈ ಹಿಂದೆ ಬರಾಕ್ ಒಬಾಮ ಅವರು 2010 ಮತ್ತು 2015ರಲ್ಲಿ ಎರಡು ಬಾರಿ ಭಾರತಕ್ಕೆ ಭೇಟಿ ನೀಡಿದ್ದರು.
ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ಮರೆಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ? ಮೋದಿ ಅವರೇ ಉತ್ತರಿಸುವಿರಾ?
2/2— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) February 18, 2020

Leave a Reply