ಭಾರತದ ಮೊದಲ ವಿಶ್ವದರ್ಜೆಯ ರೈಲು ನಿಲ್ದಾಣ ಉದ್ಘಾಟನೆ

ಭೋಪಾಲ್‌: ಮಧ್ಯಪ್ರದೇಶದ ಹಬೀಬ್‌ಗಂಜ್‌ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ ವಿಶ್ವ ದರ್ಜೆಯ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ.

ರಾಣಿ ಕಮಲಪತಿ ರೈಲು ನಿಲ್ದಾಣ ಎಂದು ಮರುನಾಮಕರಣಗೊಂಡ ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಆಧುನಿಕ ವಿಶ್ವ ದರ್ಜೆಯ ವೈಶಿಷ್ಟ್ಯಗಳೊಂದಿಗೆ ಮತ್ತು ಆಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಿರುವುದು ವಿಶೇಷ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಈ ನಿಲ್ದಾಣ ಹೊಂದಿದೆ. ರೈಲ್ವೇ ನಿಲ್ದಾಣವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿದ್ದು ಖಾಸಗಿ ಕಂಪನಿ ನಿರ್ಮಿಸಿದೆ. ಇದನ್ನೂ ಓದಿ: ಹಾಡಹಗಲೇ ಕೇರಳದಲ್ಲಿ RSS ಕಾರ್ಯಕರ್ತನ ಬರ್ಬರ ಹತ್ಯೆ

ಪ್ಲಾಟ್‌ಫಾರ್ಮ್‌ಗೆ ತಲುಪಲು ನಿಲ್ದಾಣದಲ್ಲಿ ಎಸ್ಕಲೇಟರ್‌ಗಳು ಮತ್ತು ಲಿಫ್ಟ್‌ಗಳನ್ನು ಅಳವಡಿಸಲಾಗಿದೆ. ತೆರೆದ ಸಭಾಂಗಣದಲ್ಲಿ 700 ರಿಂದ 1,100 ಪ್ರಯಾಣಿಕರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ರೈಲುಗಳ ಸಂಚಾರದ ಮಾಹಿತಿಗಾಗಿ ನಿಲ್ದಾಣದಾದ್ಯಂತ ವಿವಿಧ ಭಾಷೆಯ ಡಿಸ್ಪ್ಲೇ ಬೋರ್ಡ್‌ಗಳನ್ನು ಅಳವಡಿಸಲಾಗಿದೆ.

ಈ ನಿಲ್ದಾಣವು ಫುಡ್ ಕೋರ್ಟ್‌ಗಳು, ರೆಸ್ಟೋರೆಂಟ್‌ಗಳು, ಹವಾನಿಯಂತ್ರಿತ ಕಾಯುವ ಕೊಠಡಿಗಳು, ಡಾರ್ಮಿಟರಿ, ವಿಐಪಿ ಲಾಂಜ್‌ಗಳನ್ನು ಸಹ ಹೊಂದಿದೆ. ನಿಲ್ದಾಣದಲ್ಲಿ 160 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದನ್ನೂ ಓದಿ: ನೇಪಾಳದಲ್ಲಿ ಭೂಕಂಪಕ್ಕೆ ಮನೆ ಕಳೆದುಕೊಂಡವರಿಗೆ 50 ಸಾವಿರ ಮನೆ ಕಟ್ಟಿಕೊಟ್ಟ ಭಾರತ

ಪ್ರವಾಸೋದ್ಯಮ ಮತ್ತು ರಾಜ್ಯದ ಸಂಸ್ಕೃತಿಯ ಬಗ್ಗೆ ಮಾಹಿತಿ ನೀಡಲು ಪ್ರವಾಸಿ ಮಾಹಿತಿ ಕೋಣೆಯನ್ನು ಸ್ಥಾಪಿಸಲಾಗುತ್ತದೆ. ಮೊದಲ ಮಹಡಿಯ ನಿರೀಕ್ಷಣಾ ಹಾಲ್‌ನಲ್ಲಿ ದೊಡ್ಡ ಎಲ್‌ಇಡಿ ಪರದೆಯನ್ನು ಹಾಕಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.

ಪ್ರವಾಸೋದ್ಯಮ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಾಹಿತ್ಯ, ಕಾಫಿ-ಟೇಬಲ್ ಪುಸ್ತಕಗಳು ಮತ್ತು ಕರಪತ್ರಗಳು ಹಬೀಬ್‌ಗಂಜ್ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರಿಗೆ ಸುಲಭವಾಗಿ ಸಿಗಲಿದೆ.

Comments

Leave a Reply

Your email address will not be published. Required fields are marked *