ಪ್ರಧಾನಿಗೆ ಭದ್ರತಾ ವೈಫಲ್ಯ – ಸುಪ್ರೀಂ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ, ನಾಳೆ ಮಹತ್ವದ ವಿಚಾರಣೆ

ನವದೆಹಲಿ: ನಿನ್ನೆ ಪಂಜಾಬ್‍ನ ಹುಸೇನ್‍ವಾಲಾದಲ್ಲಾದ ಪ್ರಧಾನಿ ನರೇಂದ್ರ ಮೋದಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ.

ಲಾಯರ್ಸ್ ವಾಯ್ಸ್ ಅಸೋಸಿಯೇಷನ್ ಸಲ್ಲಿಸಿದ ಅರ್ಜಿಯನ್ನು ಹಿರಿಯ ವಕೀಲ ಮಣಿಂದರ್ ಸಿಂಗ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್.ವಿ ರಮಣ ನೇತೃತ್ವದ ಪೀಠದ ಮುಂದೆ ಪ್ರಸ್ತಾಪಿಸಿದರು, ಪೀಠ ಈ ಬಗ್ಗೆ ನಾಳೆ ವಿಚಾರಣೆಗೆ ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ: ಮೋದಿ ಭದ್ರತಾ ಲೋಪಕ್ಕೆ ಪಂಜಾಬ್ ಪೊಲೀಸ್ ಇಲಾಖೆ ಕಾರಣ – ಕೇಂದ್ರ ಗೃಹ ಸಚಿವಾಲಯ

ವಿಷಯ ಪ್ರಸ್ತಾಪದ ವೇಳೆ ಇಂತಹ ದುರ್ಘಟನೆಗಳು ಪುನಾರವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದು ಮಣಿಂದರ್ ಸಿಂಗ್ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನಾವು ಅದಕ್ಕೆ ಏನು ಮಾಡಬಹುದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ

ಇದಕ್ಕೆ ಉತ್ತರಿಸಿದ ವಕೀಲ ಮಣಿಂದರ್ ಸಿಂಗ್, ಈ ರೀತಿಯ ಘಟನೆಗಳನ್ನು ನಾವು ನಿರೀಕ್ಷಿಸುವುದಿಲ್ಲ, ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯಬಾರದು, ಈ ಹಿನ್ನಲೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಎಂದು ಮನವಿ ಮಾಡಿದರು. ಅಲ್ಲದೇ ಪಂಜಾಬ್‍ನ ಮುಖ್ಯ ಕಾರ್ಯದರ್ಶಿ ಅನಿರುದ್ಧ್ ತಿವಾರಿ ಮತ್ತು ಪೊಲೀಸ್ ಮಹಾನಿರ್ದೇಶಕ ಸಿದ್ಧಾರ್ಥ್ ಚಟ್ಟೋಪಾಧ್ಯಾಯ ಅವರನ್ನು ಅಮಾನತುಗೊಳಿಸುವಂತೆಯೂ ಮನವಿಯಲ್ಲಿ ಕೋರಲಾಯಿತು.

ಮನವಿ ಆಲಿಸಿದ ಪೀಠ ನಾಳೆ ಈ ಬಗ್ಗೆ ವಿಸ್ತೃತವಾಗಿ ವಿಚಾರಣೆ ನಡೆಸುತ್ತೇವೆ, ನೀವೂ ಕೇಂದ್ರ ಮತ್ತು ಪಂಜಾಬ್ ಸರ್ಕಾರಕ್ಕೆ ಅರ್ಜಿಯ ಪ್ರತಿಗಳನ್ನು ರವಾನಿಸಿ ಎಂದು ಸೂಚಿಸಿತು. ಇದನ್ನೂ ಓದಿ: ಭದ್ರತಾ ಲೋಪವಾಗಿಲ್ಲ, ಜನರಿಲ್ಲದೇ ಖಾಲಿ ಕುರ್ಚಿಗಳಿದ್ದ ಕಾರಣ ಪಿಎಂ ರ‍್ಯಾಲಿ ರದ್ದು: ಪಂಜಾಬ್‌ ಸಿಎಂ

Comments

Leave a Reply

Your email address will not be published. Required fields are marked *