ದೇಶದ ತುರ್ತು ಪರಿಸ್ಥಿತಿಯ ಸಂದರ್ಭ ಯಾದವ್ ಜೀ ಸೈನಿಕರಾಗಿದ್ದರು: ಮೋದಿ ಸಂತಾಪ

ಲಕ್ನೋ: ಉತ್ತರ ಪ್ರದೇಶದ (Uttar Pradesh)  ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ (Samajwadi Party) ವರಿಷ್ಠ ಮುಲಾಯಂ ಸಿಂಗ್ ಯಾದವ್ (Mulayam Singh Yadav) ದೇಶದಲ್ಲಿ ಉಂಟಾಗಿದ್ದ ತುರ್ತು ಪರಿಸ್ಥಿತಿ (Emergency) ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪ್ರಮುಖ ಸೈನಿಕರಾಗಿ ಹೋರಾಡಿದವರು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೊಗಳಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಮುಲಾಯಂ ಸಿಂಗ್ ಯಾದವ್ ಜೀ ಉತ್ತರಪ್ರದೇಶ ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡವರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪ್ರಮುಖ ಸೈನಿಕರಾಗಿದ್ದರು. ರಕ್ಷಣಾ ಸಚಿವರಾಗಿ ಅವರು ಬಲಿಷ್ಠ ಭಾರತಕ್ಕಾಗಿ ಶ್ರಮಿಸಿದರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಮಹತ್ವವನ್ನು ಪಡೆದುಕೊಂಡಿತ್ತು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಹೆಚ್ಚಿಸಲು ಒತ್ತು ನೀಡಿದ್ದವು. ಇದನ್ನೂ ಓದಿ: ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ನಿಧನ

ಮುಲಾಯಂ ಸಿಂಗ್ ಯಾದವ್ ಜೀ ಅಸಾಧಾರಣ ವ್ಯಕ್ತಿತ್ವ ಹೊಂದಿದ್ದರು. ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದ ಅವರು ಜನರಿಗೆ ಯಾವತ್ತು ಸಹಾಯಕ್ಕಾಗಿ ತುಡಿಯುತ್ತಿದ್ದರು. ಹಾಗಾಗಿ ನೆಲದ ನಾಯಕರಾಗಿ ವ್ಯಾಪಕವಾಗಿ ಹೆಸರು ಗಳಿಸಿದ್ದರು. ತುಂಬಾ ಶ್ರದ್ಧೆಯ ಕೆಲಸಗಾರರಾಗಿದ್ದ ಮುಲಾಯಂ ಸಿಂಗ್ ಯಾದವ್ ಜೀ, ಲೋಕನಾಯಕ್ ಜೆಪಿ ಮತ್ತು ಡಾ. ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ಇದನ್ನೂ ಓದಿ: ಮುಲಾಯಂ ಸಿಂಗ್‌ ಯಾದವ್ ನಿಧನ – ಸಿಎಂ ಬೊಮ್ಮಾಯಿ ಸಂತಾಪ

ನಾವು ರಾಜ್ಯಗಳ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದಾಗ ನಾನು ಮುಲಾಯಂ ಸಿಂಗ್ ಯಾದವ್ ಜೀ ಅವರೊಂದಿಗೆ ಅನೇಕ ಸಂವಾದಗಳನ್ನು ನಡೆಸಿದೆ. ಆ ಬಳಿಕ ನಮ್ಮಿಬ್ಬರೊಂದಿಗೆ ನಿಕಟ ಒಡನಾಟವು ಮುಂದುವರಿಯಿತು. ನಾನು ಯಾವಾಗಲೂ ಅವರ ಅಭಿಪ್ರಾಯಗಳನ್ನು ಕೇಳಲು ಎದುರು ನೋಡುತ್ತಿದ್ದೆ. ಅವರ ನಿಧನ ನನಗೆ ನೋವು ತಂದಿದೆ. ಅವರ ಕುಟುಂಬಕ್ಕೆ ಮತ್ತು ಲಕ್ಷಾಂತರ ಬೆಂಬಲಿಗರಿಗೆ ದು:ಖವನ್ನು ಸಹಿಸುವ ಶಕ್ತಿ ದೇವರು ಕರುಣಿಸಲಿ ಸಂತಾಪ. ಓಂ ಶಾಂತಿ ಎಂದು ಬರೆದುಕೊಂಡು ಮೋದಿ ಟ್ವೀಟ್ ಮಾಡಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 82 ವರ್ಷದ ಮುಲಾಯಂ ಸಿಂಗ್ ಅವರನ್ನು ಅ. 2ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಕೊನೆಯುಸಿರೆಳೆದಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *