ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ – ತಾಯಿ, ಮಗಳಿಗೆ ಗಂಭೀರ ಗಾಯ

ಮಂಗಳೂರು: ಓವರ್‌ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಡಿಕ್ಕಿಯಾಗಿ ತಾಯಿ ಮತ್ತು ಮಗಳಿಗೆ ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ತೋಡಾರ್ ಬಳಿ ನಡೆದಿದೆ.

ಆಕ್ರೋಶಿತ ವಿದ್ಯಾರ್ಥಿಗಳು ಖಾಸಗಿ ಬಸ್‌ನ ಗಾಜು ಪುಡಿ ಮಾಡಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಕಾಲೇಜು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಮಂಗಳೂರಿನಿಂದ ಮೂಡಬಿದ್ರೆಗೆ ಖಾಸಗಿ ಬಸ್ ಹೋಗುತ್ತಿತ್ತು. ತೋಡಾರ್ ಮೈಟ್ ಕಾಲೇಜ್ ಬಳಿ ಕಾಲೇಜಿನ ಬಸ್ಸನ್ನು ಓವರ್‌ಟೇಕ್ ಮಾಡುವ ಸಂದರ್ಭ ಘಟನೆ ನಡೆದಿದೆ. ಬಸ್, ಆಕ್ಟೀವಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗಳು ಗಾಯಗೊಂಡಿದ್ದಾರೆ. ಇಬ್ಬರನ್ನೂ ಆಸ್ಪತ್ರಗೆ ದಾಖಲಿಸಲಾಗಿದೆ.