ಕಲಬುರಗಿ: ಬೈಕ್‍ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ತಾಲೂಕಿನ ಫರಹತ್ತಬಾದ್ ಗ್ರಾಮದ ಶಹಬಾದ್ ಕ್ರಾಸ್ ಬಳಿ ನಡೆದಿದೆ.
ಬಾಬುರಾವ್(45), ಅನಿತಾ(40) ಹಾಗೂ ಐದು ವರ್ಷದ ಮೊಮ್ಮಗ ಶುಭಂ ಮೃತ ದುರ್ದೈವಿಗಳು. ಇವರು ಬಸವಕಲ್ಯಾಣದಿಂದ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಂಥಣಿಗೆ ಬೈಕ್ ನಲ್ಲಿ ಹೊರಟಿದ್ದರು. ಈ ವೇಳೆ ಬೆಂಗಳೂರು ಮೂಲದ ಆರೆಂಜ್ ಟ್ರಾವೆಲ್ಸ್‍ಗೆ ಸೇರಿದ ಖಾಸಗಿ ಬಸ್, ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಫರಹತ್ತಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





Leave a Reply