ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೆಜ್ಜಲಗಟ್ಟಾದಲ್ಲಿ ಖಾಸಗಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಸ್ವಲ್ಪದರಲ್ಲೆ ಭಾರೀ ಅನಾಹುತವೊಂದು ತಪ್ಪಿದೆ.
ಗ್ರಾಮದ ಟ್ಯಾಗೋರ್ ಸ್ಮಾರಕ ಪ್ರೌಢ ಶಾಲೆಯಲ್ಲಿ ಶುಕ್ರವಾರ ಸಂಜೆ ಘಟನೆ ನಡೆದಿದೆ. ಮಕ್ಕಳು ಶಾಲೆಯಿಂದ ಮನೆಗೆ ತೆರಳಿದ ಬಳಿಕ ಮೆಲ್ಛಾವಣಿ ಹೆಂಚುಗಳು ಕುಸಿದು ಬಿದ್ದಿವೆ. ಹೀಗಾಗಿ ಘಟನೆಯ ವೇಳೆ ಮಕ್ಕಳು ಶಾಲೆಯಲ್ಲಿ ಇಲ್ಲದಿದ್ದುದರಿಂದ ಅನಾಹುತ ತಪ್ಪಿದೆ.

60 ವರ್ಷದಷ್ಟು ಹಳೆಯದಾದ ಕಟ್ಟಡವನ್ನ ದುರಸ್ತಿ ಮಾಡದ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯವನ್ನ ಗ್ರಾಮಸ್ಥರು ಖಂಡಿಸಿದ್ದಾರೆ. ಶನಿವಾರ ಶಾಲೆಗೆ ಬೀಗ ಜಡಿದು ಮಕ್ಕಳನ್ನು ಹೊರಗೆ ಕೂರಿಸಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯ ಸಂದರ್ಭದಲ್ಲಿ ಟ್ಯಾಗೋರ್ ಶಿಕ್ಷಣ ಸಂಸ್ಥೆಯವರು ಸ್ಥಳಕ್ಕೆ ಬರುವಂತೆ ವಿದ್ಯಾರ್ಥಿಗಳ ಪೋಷಕರು ಒತ್ತಾಯಿಸಿದ್ದಾರೆ.


Leave a Reply