ಪಿಡಿಓ ಹೆದರಿಸಿ ಉಮೇಶ್ ಜಾಧವ್ ಬಿಲ್ ಮಾಡಿಸಿಕೊಂಡಿದ್ದಾರೆ: ಪ್ರಿಯಾಂಕ್ ಖರ್ಗೆ ಆರೋಪ

ಕಲಬುರಗಿ: ಸಂಸದ ಉಮೇಶ್ ಜಾಧವ್ ಅವರು ಪಿಡಿಓರನ್ನು ಹೆದರಿಸಿ ಬಿಲ್ ಮಾಡಿಸಿಕೊಂಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘ 40% ಸರ್ಕಾರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ನಮ್ಮ ಕಲಬುರಗಿ ಜಿಲ್ಲೆಯಲ್ಲಿ ವಸೂಲಿ 40% ಅನ್ನೂ ದಾಟಿ ಹೋಗಿದೆ. ಗ್ರಾಪಂ ಸದಸ್ಯರು ಉದ್ಯೋಗ ಖಾತ್ರಿಯಲ್ಲಿ ಆಗದ ಕೆಲಸಕ್ಕೆ ಸಂಸದರ ಮುಖಾಂತರ ಬಿಲ್ ಮಾಡಿಸಿಕೊಂಡಿದ್ದಾರೆ. ಬಿಲ್ ಹಾಕಿಸಿಕೊಳ್ಳುವುದಕ್ಕಾಗಿ ಚಿತ್ತಾಪುರ ತಾಲೂಕಿನ ಬಿಳಗೆರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಬೆದರಿಕೆ ಹಾಕಿರುವ ವೀಡಿಯೋ ಇದೆ. ಆದರೆ ಅದು ನನ್ನ ಕ್ಷೇತ್ರದ್ದು ಎನ್ನುವ ಕಾರಣಕ್ಕೆ ವೀಡಿಯೋವನ್ನು ಬಿಡುಗಡೆ ಮಾಡುತ್ತಿಲ್ಲ ಎಂದರು.

ಸಂಸದ ಉಮೇಶ್ ಜಾಧವ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪ್ರಿಯಾಂಕ್ ಖರ್ಗೆ ಹಿಂದೆ ದೊಡ್ಡ ಬ್ಯಾನರ್ ಇದೆ. ಮಲ್ಲಿಕಾರ್ಜುನ್ ಖರ್ಗೆಯವರ ಮಗ ಎನ್ನುತ್ತಾರೆ. ಖರ್ಗೆಯವರ ಮನೆಯಲ್ಲಿ ಹುಟ್ಟಬೇಕು ಎಂದು ನಾನು ಅರ್ಜಿ ಹಾಕಿದ್ದೇನಾ ಎಂದು ಪ್ರಶ್ನಿಸಿದ ಅವರು, ಹಾಗಾದರೆ ಅವಿನಾಶ್ ಜಾಧವ್ ಅವರು ಉಮೇಶ್ ಜಾಧವ್ ಮನೆಯಲ್ಲಿ ಅರ್ಜಿ ಹಾಕಿ ಹುಟ್ಟಿದ್ದಾರೆ ಎಂದಾಯ್ತು. ಅವಿನಾಶ್ ಜಾಧವ್ ಕೂಡ ಜಾಧವ್ ಬ್ಯಾನರ್‌ನಲ್ಲೆ ಬಂದಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ:  ಬೇಡಿಕೆ ಈಡೇರಿಸುವಂತೆ ಪ್ರತಿಭಟಸಿದ 100ಕ್ಕೂ ಹೆಚ್ಚು ಆದಿವಾಸಿಗಳು ಪೊಲೀಸರ ವಶಕ್ಕೆ

ನಾನು ಖರ್ಗೆ ಬ್ಯಾನರ್‌ನಲ್ಲಿ ಬರುವುದಕ್ಕೂ ಮುಂಚೆ ಸಂಘಟನೆಯಿಂದ ಬಂದಿದ್ದೇನೆ. ಅದಾದ ಮೇಲೆ ಖರ್ಗೆಯವರ ಬ್ಯಾನರ್‌ನಲ್ಲಿ ಬಂದ ಮೇಲೂ ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದೆ. ಉಮೇಶ್ ಜಾಧವ್ ಅವರು ಯಾರ ಬ್ಯಾನರ್‌ನಲ್ಲಿ ಬಂದಿದ್ದಾರೆ ಎಂದು ನೆನಪಿಸಿಕೊಳ್ಳಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಭಾರತದ ಭದ್ರ ಬುನಾದಿ ದುರ್ಬಲಗೊಳಿಸಲಾಗುತ್ತಿದೆ, ದೇಶದ ಪರಂಪರೆಯನ್ನು ನಾಶ ಮಾಡಲು ಬಿಡುವುದಿಲ್ಲ: ಸೋನಿಯಾಗಾಂಧಿ

Comments

Leave a Reply

Your email address will not be published. Required fields are marked *