ಪ್ರಿಯಾಂಕಾ ಗಾಂಧಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಪೊಲೀಸರ ವಿರುದ್ಧ ಕ್ರಮ

Priyanka Gandhi

ಲಕ್ನೋ: ಕಾಂಗ್ರೆಸ್ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಮಹಿಳಾ ಪೊಲೀಸ್ ಕಾನ್ಸ್‌ಸ್ಟೇಬಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಉತ್ತರ ಪ್ರದೇಶದಿಂದ ಆಗ್ರಾಕ್ಕೆ ಹೋಗುವಾಗ ಲಕ್ನೋ ಹೊರವಲಯದಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಮಹಿಳಾ ಕಾನ್ಸ್‌ಸ್ಟೇಬಲ್‌ ಗುಂಪೊಂದು ಸೆಲ್ಫಿ ಕ್ಲಿಕ್ಕಿಸಿಕೊಂಡಿದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದಾಗ್ಯೂ ಈ ವಿಚಾರ ಕಾನ್ಸ್‌ಸ್ಟೇಬಲ್‍ಗಳಿಗೆ ಖುಷಿಯಾದ ವಿಚಾರವಾಗಿ ಪರಿಣಮಿಸದೇ ಸಮಸ್ಯೆಯಾಗಿ ಎದುರಾಗಿದೆ. ಇದನ್ನೂ ಓದಿ: ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ: ಬಸವರಾಜ ಬೊಮ್ಮಾಯಿ

ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ಫೋಟೋಗೆ ಪೋಸ್ ನೀಡಿದ ಮಹಿಳಾ ಕಾನ್ಸ್‌ಸ್ಟೇಬಲ್‌ಗಳು ಕ್ರಮ ಎದುರಿಸಬೇಕಾಗುತ್ತದೆ ಎಂದು ಲಕ್ನೋ ಪೊಲೀಸ್ ಆಯುಕ್ತ ಡಿ.ಕೆ. ಠಾಕೂರ್ ತಿಳಿಸಿದ್ದಾರೆ. ಇದನ್ನೂ ಓದಿ: ಪಠ್ಯಪುಸ್ತಕದಲ್ಲಿ ಪ್ರವಾದಿ, ಇಸ್ಲಾಂ ಅವಹೇಳನ – ಪ್ರೊ.ಬಿ.ಆರ್.ರಾಮಚಂದ್ರಯ್ಯರನ್ನು ಕೆಲಸದಿಂದ ವಜಾಗೊಳಿಸಿಲು ಆಗ್ರಹ

ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ನನ್ನ ಜೊತೆ ಫೋಟೋ ತೆಗೆದುಕೊಳ್ಳುವುದು ಅಪರಾಧ ಆಗಿದ್ದರೆ, ನನಗೆ ಶಿಕ್ಷೆ ನೀಡಬೇಕು, ಆದರೆ ಮಹಿಳಾ ಕಾನ್ಸ್‌ಸ್ಟೇಬಲ್‌ಗಳನ್ನು ದೂಷಿಸುವುದು ಏಕೆ? ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ- ನಾಳೆ ತುಮಕೂರು ಬಂದ್

ಯೋಗಿ ಆದಿತ್ಯನಾಥ್ ಅವರಿಗೆ ಈ ಫೋಟೋ ವಿಚಾರವಾಗಿ ಅಸಮಾಧಾನವಿದ್ದು, ಅವರು ಈ ಮಹಿಳಾ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಇದ್ದಾರೆ ಎಂಬ ವಿಚಾರ ಹರಿದಾಡುತ್ತಿದೆ. ನನ್ನೊಂದಿಗೆ ಫೋಟೋ ತೆಗೆದುಕೊಂಡಿರುವುದು ಅಪರಾಧವಾಗಿದ್ದರೆ, ಅದಕ್ಕಾಗಿ ನನಗೆ ಶಿಕ್ಷೆ ನೀಡಬೇಕು. ಅದನ್ನು ಹೊರತುಪಡಿಸಿ ಈ ಶ್ರಮಜೀವಿ ಮತ್ತು ನಿಷ್ಠಾವಂತ ಪೊಲೀಸರ ವೃತ್ತಿಯನ್ನು ಹಾಳುಮಾಡುವುದು ಸರ್ಕಾರಕ್ಕೆ ಕ್ಷೋಭೆಯಲ್ಲ ಎಂದಿದ್ದಾರೆ.

25 ಲಕ್ಷ ಕಳ್ಳತನ ಮಾಡಿದ ಆರೋಪದಲ್ಲಿ ಅರುಣ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧನ ಮಾಡಿದ್ದರು. ಆದರೆ ಆ ವ್ಯಕ್ತಿಯು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಲು ಹೊರಟಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಾಕ್ಕೆ ತೆರಳುತ್ತಿದ್ದರು. ಆದರೆ ಈ ವೇಳೆ ಪ್ರಿಯಾಂಕಾ ಗಾಂಧಿ ಭೇಟಿಯಿಂದ ಅಲ್ಲಿನ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದ್ದಿದ್ದರಿಂದ ಪೊಲೀಸರು ಅವರನ್ನು ವಶಕ್ಕೆ ಪಡೆದಿದರು. ಆದರೆ ಸ್ವಲ್ಪ ಸಮಯದ ನಂತರ ಬಿಡುಗಡೆಗೊಳಿಸಿ ಕೇವಲ ನಾಲ್ಕು ಮಂದಿಗೆ ಮಾತ್ರ ಆಗ್ರಾಗೆ ಹೋಗಲು ಅನುಮತಿ ನೀಡಲಾಯಿತು.

Comments

Leave a Reply

Your email address will not be published. Required fields are marked *