ಬಿಜೆಪಿ ರೈತರನ್ನು ಬೆಂಬಲಿಸಲಿಲ್ಲ: ಪ್ರಿಯಾಂಕಾ ಗಾಂಧಿ ಕಿಡಿ

ನವದೆಹಲಿ: ಬಿಜೆಪಿ ಸರ್ಕಾರ ರೈತರೊಂದಿಗೆ ನಿಲ್ಲುವ ಬದಲು ಲಖಿಂಪುರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರಿಗೆ ಬೆಂಬಲ ನೀಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದರು.

ಈ ಬಗ್ಗೆ ಮಾತನಾಡಿ ಲಖಿಂಪುರ ಹತ್ಯಾಕಾಂಡಕ್ಕೆ ಅಜಯ್ ಮಿಶ್ರಾ ಅವರ ಭಾಷಣವೇ ಕಾರಣವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಉನ್ನತ ಹುದ್ದೆಯಲ್ಲಿದ್ದ ಅಧಿಕಾರಿಗಳು ಬೇಜವಾಬ್ದಾರಿಯ ಹೇಳಿಕೆಗಳನ್ನು ನೀಡಬಾರದು. ಸಚಿವರು ಅವರ ಸ್ಥಾನಮಾನಕ್ಕೆ ಹಾಗೂ ಇಲಾಖೆಗೆ ಘನತೆ ತರುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.

ಲಖಿಂಪುರಂನ ನ್ಯಾಯಕ್ಕಾಗಿ ಹೋರಾಟ ಮುಂದುವರಿದಿದೆ. ಸಂತ್ರಸ್ತ ರೈತರ ಕುಟುಂಬದ ಜೊತೆಗೆ ನಾವಿದ್ದೇವೆ. ನ್ಯಾಯಕ್ಕಾಗಿ ಹೋರಾಟ ನಡೆಡಸುತ್ತೇವೆ ಎಂದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದು ಆಪ್ತರ ಮೇಲೆ ಅನುಮಾನ ಪಟ್ಟಿದ್ದಾರಾ ಡಿಕೆಶಿ?

ಉನ್ನತ ಹುದ್ದೆಯಲ್ಲಿರುವ ರಾಜಕಾರಣಿಗಳು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದು. ತಮ್ಮ ಸ್ಥಾನಮಾನ ಹಾಗೂ ಹುದ್ದೆಯ ಘನತೆಗೆ ತಕ್ಕ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ ಹೇಳಿತ್ತು.

ಲಖಿಂಪುರ ಖೇರಿ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‍ನ ಲಖನೌ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತ್ತು. ಅಲ್ಲದೆ, ಜಾಮೀನು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಪ್ರಿಯಾಂಕಾ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಣ್ಣಮ್ಮ ದೇವಿ ಮೆರವಣಿಯಲ್ಲಿ ಹಿಂದೂ, ಮುಸ್ಲಿಂ ಮುಖಂಡರ ಭರ್ಜರಿ ಡಾನ್ಸ್

Comments

Leave a Reply

Your email address will not be published. Required fields are marked *