ಪ್ರೊ ಕಬಡ್ಡಿ ಜ್ವರಕ್ಕೆ ಕಿಚ್ಚು ಹಚ್ಚಲಿದ್ದಾರೆ ಕೊಹ್ಲಿ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶನಿವಾರ ಮುಂಬೈನಲ್ಲಿ ನಡೆಯಲಿರುವ ಪ್ರೊ ಕಬ್ಬಡಿ ಪಂದ್ಯದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.

ಪ್ರೊ ಕಬಡ್ಡಿ ಲೀಗ್ ನಿರ್ವಾಹಕರು ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿ ಮಾಹಿತಿ ಖಚಿತ ಪಡಿಸಿದ್ದಾರೆ. ಮುಂಬೈ ವೇದಿಕೆಯಲ್ಲಿ ಶನಿವಾರ ಪುಣೆ ಮತ್ತು ಯೂ ಮುಂಬೈ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಕೊಹ್ಲಿ ಸಾಕ್ಷಿಯಾಗಲಿದ್ದಾರೆ.

ಪಂದ್ಯದ ಆರಂಭಕ್ಕೂ ಮುನ್ನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಕೊಹ್ಲಿ ರಾಷ್ಟ್ರಗೀತೆಯನ್ನು ಹಾಡಲಿದ್ದಾರೆ. ವಿವಿಧ ರಾಜ್ಯಗಳಲ್ಲಿ ಕಬಡ್ಡಿ ಟೂರ್ನಿ ನಡೆಯುತ್ತಿರುವ ಕಾರಣ ಈ ಸಂದರ್ಭದಲ್ಲಿ ಖ್ಯಾತ ಸಿನಿಮಾ ತಾರೆಯರು, ಗಣ್ಯರು, ಇತರೇ ಕ್ರೀಡಾ ರಂಗದ ದಿಗ್ಗಜರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಜುಲೈ 20 ರಿಂದ ಆರಂಭವಾಗಿರುವ ಪ್ರೊ ಕಬಡ್ಡಿ ಟೂರ್ನಿ, ಅಕ್ಟೋಬರ್ 19ರ ವರೆಗೂ ನಡೆಯಲಿದೆ. ಆಗಸ್ಟ್ 31 ರಿಂದ ಸೆಪ್ಟೆಂಬರ್ 6ರ ವರೆಗೂ 11 ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿದೆ.

ವಿಶ್ವಕಪ್ ಸೆಮಿಫೈನಲ್ ಸೆಮಿ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ವೆಸ್ಟ್ ಇಂಡೀಸ್ ಟೂರ್ನಿಯ ಸಿದ್ಧತೆಯಲ್ಲಿದ್ದಾರೆ. ಮೊದಲು ಕೊಹ್ಲಿ ವಿಂಡೀಸ್ ಟೂರ್ನಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ ಬಿಸಿಸಿಐ ಆಯ್ಕೆ ಸಮಿತಿ ಅವರನ್ನೇ ನಾಯಕರಾಗಿ ಮುಂದುವರಿಸಿ ತಂಡವನ್ನು ರಚಿಸಿದೆ. ಅಗಸ್ಟ್ 3 ರಿಂದ ವಿಂಡೀಸ್ ಸರಣಿ ಆರಂಭ ಆಗಲಿದ್ದು, ಸರಿ ಸುಮಾರು ಒಂದು ತಿಂಗಳ ಅವಧಿಯಲ್ಲಿ ನಡೆಯಲಿರುವ ಮೂರು ಮಾದರಿಯ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಭಾಗವಹಿಸಲಿದೆ.

Comments

Leave a Reply

Your email address will not be published. Required fields are marked *