ಬೆಂಗಳೂರು: ಬೆಳಗಾವಿಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮಧ್ಯಪ್ರವೇಶದಿಂದ ಗೊಂದಲವಾಗಿದ್ದು, ಇನ್ನು ಮುಂದೆ ಅವರು ಯಾವುದೇ ಕಾರಣಕ್ಕೂ ತಲೆ ಹಾಕಬಾರದು ಎಂದು ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ವಿಚಾರದ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಚಾರಕ್ಕೆ ಡಿಕೆಶಿಯವರು ಪ್ರವೇಶಿಸಿದ್ದಕ್ಕೆ ಗೊಂದಲ ಸೃಷ್ಟಿಯಾಗಿತ್ತು. ಹೀಗಾಗಿ ಅವರು ಬೆಳಗಾವಿ ವಿಚಾರಕ್ಕೆ ಯಾವುದೇ ಕಾರಣಕ್ಕೂ ಮಧ್ಯ ಪ್ರವೇಶ ಮಾಡುವಂತಿಲ್ಲ. ನಮ್ಮ ಸಮಸ್ಯೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ವಿಚಾರಿಸಿ, ಬಗೆಹರಿಸಿದರೇ ಎಲ್ಲಾ ಸರಿ ಹೋಗುತ್ತೆ. ನಾನು ಕೂಡ ಮುಖ್ಯಮಂತ್ರಿಯಾಗಬೇಕು ಅದಕ್ಕೆ ಇನ್ನೂ ಸಮಯವಿದೆ ಎಂದು ಹೇಳಿದರು.

ಕಳೆದ ನಾಲ್ಕು ತಿಂಗಳಿನಿಂದಲೂ ಬಿಜೆಪಿ ನಾಯಕರ ಒತ್ತಡ ನಮ್ಮ ಮೇಲಿದೆ. ಆದರೆ ನಾವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು. ಈ ಸರ್ಕಾರಕ್ಕೆ ನಮ್ಮಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ನನ್ನ ಸಹೋದರನ ಜೊತೆ ಸಮಸ್ಯೆಗಳ ಬಗ್ಗೆ ಇಂದು ಚರ್ಚೆ ನಡೆಸುತ್ತೇನೆ. ಯಾವೆಲ್ಲಾ ಬಿಜೆಪಿ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply