ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದಲ್ಲಿ 144 ಸೆಕ್ಷನ್ ಜಾರಿಯಾಗಿದ್ದು, ನಿರಂತರ 20 ದಿನಗಳ ಕಾಲ ನಿಷೇಧಾಜ್ಞೆ ಜಾರಿಯಾಗಿದೆ.
ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಅವರು, ಫೆಬ್ರವರಿ 4 ರಿಂದ ಫೆಬ್ರವರಿ 25ರ ವರೆಗೆ ನಿಷೇಧಾಜ್ಞೆಯ ಆದೇಶವನ್ನು ಹೊರಡಿಸಿದ್ದಾರೆ. ಪವರ್ ಗ್ರಿಡ್ ಭಾದಿತ ರೈತರಿಂದ ಉಪವಾಸ ಸತ್ಯಾಗ್ರಹ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ರೈತರ ಹೋರಾಟ ಹತ್ತಿಕ್ಕಲು ಜಿಲ್ಲಾಡಳಿತ 144 ಸೆಕ್ಷನ್ ಜಾರಿಗೊಳಿಸಿದೆ.

ಇತ್ತ ರೈತರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹಕ್ಕಿಳಿದು ಗೌರಿಬಿದನೂರು ತಾಲೂಕು ಕಚೇರಿ ಎದುರು ಸತ್ಯಾಗ್ರಹ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಶಾಂತಿಭಂಗ ಹಾಗೂ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಹೋಬಳಿಯನ್ನ ತಾಲೂಕು ಕೇಂದ್ರ ಮಾಡುವಂತೆ ಆಗ್ರಹಿಸಿದ್ದು, ಸ್ವಯಂಪ್ರೇರಿತವಾಗಿ ಸಾರ್ವಜನಿಕರಿಂದ ಚೇಳೂರು ಸಂಪೂರ್ಣ ಬಂದ್ ಮಾಡಿದ್ದಾರೆ. ಅಂಗಡಿ ಮುಂಗಟ್ಟು ಮುಚ್ಚಿ ವ್ಯಾಪಾರ ವಹಿವಾಟುಗಳನ್ನು ಸ್ಥಗಿತ ಮಾಡಿದ್ದು, ವಾಹನ ಸಂಚಾರ ಬಂದ್ ಮಾಡಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply