ಗುತ್ತಿಗೆ ಕಾರ್ಮಿಕರ ಪ್ರತಿಭಟನೆಯಲ್ಲಿ ಹಿಂಸಾಚಾರ – 20 ಪೊಲೀಸರಿಗೆ ಗಾಯ

ರಾಯ್ಪುರ: ಛತ್ತೀಸ್‌ಗಢದ ಮದ್ವಾದಲ್ಲಿ ಉಷ್ಣ ವಿದ್ಯುತ್ ಸ್ಥಾವರದ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದು, ಹಿಂಸಾಚಾರಕ್ಕೆ ತಿರುಗಿ ಸುಮಾರು 20 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಛತ್ತೀಸ್‌ಗಢದ ಜಾಂಜ್‌ಗಿರ್-ಚಂಪಾ ಜಿಲ್ಲೆಯ ಮದ್ವಾದಲ್ಲಿ ಅಟಲ್ ಬಿಹಾರಿ ವಾಜಪೇಯಿ ಥರ್ಮಲ್ ಪವರ್ ಪ್ಲಾಂಟ್‌ನ ಗುತ್ತಿಗೆ ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿದ್ದು, ಹಿಂಸಾಚಾರಕ್ಕೆ ತಿರುಗಿದೆ.

ಛತ್ತೀಸ್‌ಗಢದ ಸ್ಟೇಟ್ ಪವರ್ ಕಂಪನಿ ನಿರ್ವಹಿಸುತ್ತಿರುವ ಥರ್ಮಲ್ ಪವರ್ ಪ್ಲಾಂಟ್‌ನ ಗುತ್ತಿಗೆ ಕಾರ್ಮಿಕರು ತಮ್ಮ ಸೇವೆಗಳನ್ನು ಖಾಯಂ ಗೊಳಿಸಬೇಕೆಂದು ಒತ್ತಾಯಿಸಿ, ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಇದನ್ನೂ ಓದಿ: ಇಂದಿನಿಂದ 15-18 ವಯಸ್ಸಿನ ಮಕ್ಕಳಿಗೆ ಕೋವಿಡ್‌ ಲಸಿಕೆ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳದಿಂದ ಪೊಲೀಸರು ಪ್ರತಿಭಟನೆಯನ್ನು ತಡೆಯಲು ಪ್ರಯತ್ನಿಸಿದಾಗ, ಹಿಂಸಾಚಾರಕ್ಕೆ ತಿರುಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಸುಮಾರು 20 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಹಲವಾರು ಪೊಲೀಸ್ ವಾಹನಗಳ ವಿಂಡ್‌ಸ್ಕ್ರೀನ್‌ಗಳನ್ನು ಒಡೆದಿದ್ದು, ಖಾಸಗಿ ವಾಹನಗಳಿಗೂ ಬೆಂಕಿ ಹಚ್ಚಲಾಗಿದೆ. ಇದನ್ನೂ ಓದಿ: ‘ಫಿಟ್ ಇಂಡಿಯಾ’ ಬಗ್ಗೆ ಅರಿವು ಮೂಡಿಸಲು ಜಿಮ್‌ನಲ್ಲಿ ವರ್ಕೌಟ್ ಮಾಡಿದ ಮೋದಿ

ಸದ್ಯ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಜಾಂಜ್‌ಗೀರ್-ಚಂಪಾ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಠಾಕೂರ್ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *