ಪ್ರಾವಿಷನ್ ಸ್ಟೋರ್ ನಲ್ಲಿ ಅಗ್ನಿ ಅವಘಡ- 7 ಲಕ್ಷ ರೂ. ನಷ್ಟ

ಮಂಡ್ಯ: ಗುರುವಾರ ರಾತ್ರಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದಾಗಿ ಪ್ರಾವಿಷನ್ ಸ್ಟೋರ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆ ಮದ್ದೂರು ತಾಲೂಕಿನ ಬೆಸಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಸಗರಹಳ್ಳಿ ಗ್ರಾಮದ ನಿವಾಸಿ ಕಿರಣ್ ಎಂಬವರಿಗೆ ಸೇರಿದ್ದ ಖುಷಿ ಪ್ರಾವಿಷನ್ ಸ್ಟೋರ್ ಬೆಂಕಿಗಾಹುತಿಯಾಗಿದೆ. ರಾತ್ರಿ ಅಂಗಡಿ ಮುಚ್ಚಿದ ಬಳಿಕ ಅಗ್ನಿ ಅವಘಡ ಸಂಭವಿಸಿದೆ. ಬ್ಯಾಂಕ್‍ನಿಂದ ಸಾಲ ಪಡೆದು ಮತ್ತು ಕೈಸಾಲ ಮಾಡಿ ಕಿರಣ್ ಅಂಗಡಿಯನ್ನು ನಡೆಸುತ್ತಿದ್ದರು. ಈ ಒಂದು ವಿದ್ಯುತ್ ಅವಘಡದಿಂದ ಸುಮಾರು 7 ಲಕ್ಷ ರೂ. ನಷ್ಟವಾಗಿದೆ. ಅಲ್ಲದೆ ಅಪಾರ ಪ್ರಮಾಣದ ಆಹಾರ ಪದಾರ್ಥಗಳು ಸುಟ್ಟುಹೋಗಿದೆ.

ಕಿರಣ್ ಅವರ ಕುಟುಂಬದ ನಿರ್ವಹಣೆಗೆ ಈ ಅಂಗಡಿಯೇ ಆಧಾರವಾಗಿತ್ತು. ಹೀಗಾಗಿ ನನಗೆ ಪರಿಹಾರ ಕೊಡಿಸಬೇಕೆಂದು ಮಾಲೀಕ ಕಿರಣ್ ಮನವಿ ಮಾಡಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ ಪರಿಣಾಮ ಹೆಚ್ಚಿನ ಅವಘಡ ತಪ್ಪಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಘಟನೆ ಕುರಿತು ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *