ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

ಕಲಬುರಗಿ: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಕಿಂಗ್ ಪಿನ್ ಆರ್.ಡಿ.ಪಾಟೀಲ್‍ನನ್ನು ಪೊಲೀಸರು ಬಂಧಿಸಿದ್ದಾರೆ.

ಅಫಜಲಪುರ ಬ್ಲಾಕ್‍ನ ಕಾಂಗ್ರೆಸ್ ಅಧ್ಯಕ್ಷನ ಸಹೋದರನಾಗಿರುವ ಆರ್.ಡಿ.ಪಾಟೀಲ್ ಪಿಎಸ್‍ಐ ನೇಮಕಾತಿಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಮೂಲಕ ಅಭ್ಯರ್ಥಿಗಳಿಗೆ ಆನ್ಸರ್ ಕೀ ರವಾನಿಸಿದ್ದನು. ಇದನ್ನೂ ಓದಿ:  ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣ – ಸ್ಫೋಟಕ ಆಡಿಯೋ ಔಟ್

ಈ ಹಿಂದೆ ಸಹ ಕೆಎಎಸ್, ಎಫ್‍ಡಿಎ, ಎಸ್‍ಡಿಎ ಸೇರಿದಂತೆ ಹಲವು ಜನರಿಗೆ ವಾಮಮಾರ್ಗದ ಮೂಲಕ ಆರ್.ಡಿ.ಪಾಟೀಲ್ ಸೆಲೆಕ್ಟ್ ಮಾಡಿಸಿದ್ದನು. ಆದರೀಗ ವಾಮಮಾರ್ಗದ ಮೂಲಕ ಸರ್ಕಾರಿ ನೌಕರಿ ಪಡೆದ ನೂರಾರು ನೌಕರರಿಗೆ ನಡುಕ ಶುರುವಾಗಿದೆ. ಅಲ್ಲದೇ ಆರ್.ಡಿ.ಪಾಟೀಲ್ ಬಂಧನ ಆಗುತ್ತಿದ್ದಂತೆ ಅಕ್ರಮದಲ್ಲಿ ಭಾಗಿಯಾದ ಹಲವರಿಗೆ ಆತಂಕ ಪ್ರಾರಂಭವಾಗಿದೆ. ಸದ್ಯ ಈ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆಯನ್ನು ಚುರುಕಾಗಿ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ – ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರೆಸ್ಟ್‌

ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯ ಶಾಲೆಯಲ್ಲಿ ನಡೆದ ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಈಗ ಸಿಐಡಿ ತನಿಖೆ ನಡೆಸುತ್ತಿದೆ.

Comments

Leave a Reply

Your email address will not be published. Required fields are marked *