ಪಬ್ಲಿಕ್‌ ಟಿವಿ ಇಂಪ್ಯಾಕ್ಟ್: ಹೊಸದಾಗಿ ಡಾಂಬರು ಹಾಕಿದ ರಸ್ತೆ ಕುಸಿತ- ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಒಂದೇ ದಿನದಲ್ಲಿ ಬಿಬಿಎಂಪಿ ಡಾಂಬರು ರಸ್ತೆ ಹಾಳಾದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.

ಹೌದು. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕೆನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಲಾಗಿತ್ತು. ಇದೀಗ ಈ ರಸ್ತೆ ಕುಸಿದಿದೆ.‌ ಈ ಕುರಿತು ನಿಮ್ಮ ಪಬ್ಲಿಕ್‌ ಟಿವಿ ಇಂದು ರಿಯಾಲಿಟಿ ಚೆಕ್‌ ನಡೆಸಿ ವರದಿ ಪ್ರಸಾರ ಮಾಡಿತ್ತು. ಇದೀಗ ಈ ಸಂಬಂಧ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಇದನ್ನೂಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ಹಿಟ್‌ಮ್ಯಾನ್ – ಭಾವುಕ ಪತ್ರ ಬರೆದ ರೋಹಿತ್ ಶರ್ಮಾ

ಈ ರಸ್ತೆ ಕಳಪೆ ಕಾಮಗಾರಿಯು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯ ರಾಜ್ಯ ಸರ್ಕಾರದ ವರದಿ ಕೇಳಿದೆ. ಕಳಪೆ ಕಾಮಗಾರಿ ಸಂಬಂಧ ವರದಿ ನೀಡುವಂತೆ ಸಿಎಂ ಕಚೇರಿಯಿಂದ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದೆ. ಸದ್ಯ ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ ನೀರಿನ ಪೈಪ್ ಸೋರಿಕೆಯಿಂದ ರಸ್ತೆ ಕುಸಿದಿರುವುದು ಕಂಡು ಬಂದಿದೆ.

Live Tv

Comments

Leave a Reply

Your email address will not be published. Required fields are marked *