ಪಬ್ಲಿಕ್ ಟಿವಿ ‘ವಿದ್ಯಾಪೀಠ’ದಲ್ಲಿ ಯಾವೆಲ್ಲ ಸ್ಟಾಲ್‍ಗಳು ಇರಲಿವೆ – ಮೂರು ದಿನಗಳ ಶೈಕ್ಷಣಿಕ ಉತ್ಸವಕ್ಕೆ ಬನ್ನಿ

– ಅರಮನೆ ಮೈದಾನದಲ್ಲಿ ಜೂನ್ 24 ರಿಂದ ಆರಂಭ
– ಮೂರು ದಿನಗಳ ಕಾಲ ನಡೆಯಲಿದೆ ವಿದ್ಯಾಪೀಠ

ಬೆಂಗಳೂರು: ಈಗಿನ ಶಿಕ್ಷಣದ ಹೊಸ ಟ್ರೆಂಡ್ ಏನು? ಎಸ್‍ಎಸ್‍ಎಲ್‍ಸಿ, ಪಿಯುಸಿಯ ನಂತರ ಯಾವ ಕಾಲೇಜ್‍ನಲ್ಲಿ ಯಾವ ಕೋರ್ಸ್ ಇದೆ? ಈ ಕೋರ್ಸ್‍ಗಳಿಗೆ ಎಷ್ಟು ಶುಲ್ಕ ಇರುತ್ತದೆ? ಈ ಕಾಲೇಜ್‍ಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಇದ್ಯಾ? ಈ ರೀತಿಯ ಪ್ರಶ್ನೆಗಳು ಪೋಷಕರಿಗೆ, ವಿದ್ಯಾರ್ಥಿಗಳಿಗೆ ಬರುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಪಬ್ಲಿಕ್ ಟಿವಿಯ 5ನೇ ಆವೃತ್ತಿ ‘ವಿದ್ಯಾಪೀಠ’ದಲ್ಲಿ ಸುಲಭವಾಗಿ ಉತ್ತರ ಸಿಗಲಿದೆ.

ಪಬ್ಲಿಕ್ ಟಿವಿ ಮೂರು ದಿನ `ವಿದ್ಯಾಪೀಠ’ದ ಹೆಸರಿನಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮೆಗಾ ಶೈಕ್ಷಣಿಕ ಉತ್ಸವವನ್ನು ಆಯೋಜಿಸಿದೆ. ಈ ಹಿಂದೆ ಆಯೋಜಿಸಿದ ನಾಲ್ಕು ಮೆಗಾ ಶೈಕ್ಷಣಿಕ ಉತ್ಸವಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ಸಿಕ್ಕಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೂನ್ 24, 25, 26 ರಂದು ಐದನೇ ಆವೃತ್ತಿಯ ವಿದ್ಯಾಪೀಠ ಕಾರ್ಯಕ್ರಮ ನಡೆಯಲಿದೆ. ಇದನ್ನೂ ಓದಿ: ‘ವಿದ್ಯಾಪೀಠ’ದಲ್ಲಿ ಯಾರೆಲ್ಲ ಭಾಗವಹಿಸುತ್ತಿದ್ದಾರೆ? – ಉಚಿತ ಪ್ರವೇಶದ ಕಾರ್ಯಕ್ರಮಕ್ಕೆ ಬನ್ನಿ

ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯಮಿಕ ಕೋರ್ಸ್‍ಗಳ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಈ ವೇಳೆ ಕೆಸಿಇಟಿ, ನೀಟ್ ಮತ್ತು ಕಾಮೆಡ್ ಕೆ ಪರೀಕ್ಷೆಗಳಿಗಾಗಿ ಕೆಇಎ ಅಧಿಕಾರಿಗಳಿಂದ ಆಪ್ತ ಸಮಾಲೋಚನೆ, ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಅವಕಾಶವಿದೆ. ಅಷ್ಟೇ ಅಲ್ಲದೇ ಮೂರು ದಿನ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಅರ್ಧಗಂಟೆ ಉಪನ್ಯಾಸ ನಡೆದ ಬಳಿಕ 15 ನಿಮಿಷ ಪ್ರಶ್ನೋತ್ತರಕ್ಕೂ ಅವಕಾಶವಿದೆ.

ಯಾರೆಲ್ಲ ಭಾಗವಹಿಸುತ್ತಾರೆ?
ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್, ಆರ್ಕಿಟೆಕ್ಚರ್, ಕಾಮರ್ಸ್ ಮತ್ತು ಬ್ಯಾಂಕಿಂಗ್ ಸಂಸ್ಥೆಗಳು, ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜ್‍ಗಳು, ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜ್‍ಗಳು, ಸಮೂಹ ಸಂವಹನ, ಎಂಬಿಎ ಇನ್‍ಸ್ಟಿಟ್ಯೂಷನ್, ವಿದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು.

ಯಾರೆಲ್ಲ ಆಗಮಿಸಬಹುದು?
ಕೌನ್ಸೆಲರ್‍ಗಳು, ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪಿಯುಸಿ ವಿದ್ಯಾರ್ಥಿಗಳು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು

ಪ್ಲಾಟಿನಂ ಪ್ರಾಯೋಜಕರು:
ಗಾರ್ಡನ್ ಸಿಟಿ ವಿಶ್ವವಿದ್ಯಾಲಯ, ರಾಮಯ್ಯ ವಿಶ್ವವಿದ್ಯಾಲಯ, ಆಚಾರ್ಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ.

ಗೋಲ್ಡ್ ಪ್ರಾಯೋಜಕರು:
ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಕೇಬ್ರಿಡ್ಜ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಿಎಂಆರ್ ವಿಶ್ವವಿದ್ಯಾಲಯ, ರಾಮಯ್ಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಶ್ರೀ ವೆಂಕಟೇಶ್ವರ ಕಾಲೇಜ್ ಆಫ್ ಎಂಜಿನಿಯರಿಂಗ್, ಆಕ್ಸ್‌ಫರ್ಡ್ ಕಾಲೇಜ್ ಆಫ್ ಎಂಜಿನಿಯರಿಂಗ್, ನ್ಯೂ ಬಾಲ್ಡ್‌ವಿನ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಸಪ್ತಗಿರಿ ಕಾಲೇಜ್ ಆಫ್ ಎಂಜಿನಿಯರಿಂಗ್. ಕೆನರಾ ಬ್ಯಾಂಕ್

ಸಿಲ್ವರ್ ಪ್ರಾಯೋಜಕರು:
ಕೃಪಾನಿಧಿ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಎಬಿಬಿಎಸ್, ಪಿಇಎಸ್ ವಿಶ್ವವಿದ್ಯಾಲಯ, ದಯಾನಂದ ಸಾಗರ್, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ, ನಾಗಾರ್ಜುನ ಎಂಜಿನಿಯರಿಂಗ್, ಆದಿಚುಂಚನಗಿರಿ ವಿಶ್ವವಿದ್ಯಾಲಯ, ಎಕ್ಸೆಲ್ ಅಕಾಡೆಮಿಕ್ಸ್, ಏಮ್ಸ್ ಇನ್‍ಸ್ಟಿಟ್ಯೂಷನ್.

ಯಾವೆಲ್ಲ ಸ್ಟಾಲ್‍ಗಳು ಇರಲಿವೆ?
ಆರ್‌ಆರ್ ಇನ್‍ಸ್ಟಿಟ್ಯೂಷನ್ಸ್, ನಿಟ್ಟೆ ಮೀನಾಕ್ಷಿ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂಎಸ್ ಎಂಜಿನಿಯರಿಂಗ್ ಕಾಲೇಜ್, ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಮ್ಯಾನೇಜ್‍ಮೆಂಟ್, ಅಂಬೇಡ್ಕರ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಸಿಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ರಾಜರಾಜೇಶ್ವರಿ ಕಾಲೇಜ್ ಆಫ್ ಎಂಜಿನಿಯರಿಂಗ್, ರಾಜರಾಜೇಶ್ವರಿ ಕಾಲೇಜ್ ಆಫ್ ನಸಿರ್ಂಗ್, ಗೌತಮ್ ಕಾಲೇಜ್, ಐಎಫ್‍ಐಎಂ – ಜಗದೀಶ್ ಶೇಠ್ ಸ್ಕೂಲ್ ಆಫ್ ಮ್ಯಾನೇಜ್‍ಮೆಂಟ್, ಕೆಎಸ್‍ಐಟಿ, ಬಿಐಟಿ, ಕ್ರಿಸ್ ಕೆನಾಡಿಯನ್, ಜ್ಯೋತಿ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಾವಿಕ್ಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಕರ್ನಾಟಕ ಕಾಲೇಜ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್ಸ್, ಇಂಡಿಯನ್ ಅಕಾಡೆಮಿ, ಕಲ್ಪತರು ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಆದಿತ್ಯ ಗ್ರೂಪ್ ಆಫ್ ಇನ್‍ಸ್ಟಿಟ್ಯೂಟ್, ಲರ್ನ್ ಟೆಕ್, ವಿಷನ್ ಪಿಯು ಕಾಲೇಜ್, ಡಾನ್ ಬಾಸ್ಕೋ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವೇಮನ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಶೇಷಾದ್ರಿಪುರಂ ಕಾಲೇಜ್, ಬಿವಿವಿಎಸ್ ಕಾಲೇಜ್ ಬಾಗಲಕೋಟೆ, ಐಸಿಎಫ್‍ಐ(ಬ್ಯುಸಿನೆಸ್ ಸ್ಕೋಲ್), ಐಬಿಎಸ್, ಸರ್ ಎಂವಿಐಟಿ, ಸಂಭ್ರಮ್ ಇನ್‍ಸ್ಟಿಟ್ಯೂಷನ್, ಆಟ್ರಿಯಾ, ರಾಮಯ್ಯ, ಕೆಎಸ್‍ಒಯು, ಸೈಂಟ್, ವಿಬಿಆರ್ ಸಮೂಹ ಸಂಸ್ಥೆಗಳು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಕ್ಸೇವಿಯರ್ಸ್ ಕಾಲೇಜ್.

ದಿನಾಂಕ: ಜೂನ್ 24, 25, 26
ಸ್ಥಳ: ಗಾಯತ್ರಿ ವಿಹಾರ್, ಅರಮನೆ ಮೈದಾನ, ಬೆಂಗಳೂರು
ಸಮಯ: ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ

ಸಂಪರ್ಕಿಸಿ: ಪ್ರಭು 99000 60811, ಶಿವಕುಮಾರ್ 99000 60813

Live Tv

Comments

Leave a Reply

Your email address will not be published. Required fields are marked *